ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಐತಿಹಾಸಿಕ ಬೆಂಗಳೂರು ಕಂಬಳಕ್ಕೆ ಅಧಿಕೃತ ಚಾಲನೆ: ಜೋಡು ಕೆರೆ ಉದ್ಘಾಟಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಬೆಂಗಳೂರು: ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಂಬಳವನ್ನು ಆಯೋಜನೆ ಮಾಡಲಾಗಿದ್ದು, ಕಂಬಳ ಕೆರೆಗೆ ಯುವರತ್ನ ಡಾ. ಪುನಿತ್​​ ರಾಜ್​​ಕುಮಾರ್​ ಪತ್ನಿ ಅಶ್ವಿನಿ ಪುನಿತ್​ ರಾಜ್​​ಕುಮಾರ್ ಅವರು ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಶನಿವಾರ ಚಾಲನೆ ನೀಡಿದರು.

ಇದಕ್ಕೂ ಮೊದಲು ರಾಜ ಮಹರಾಜ ಹೆಸರಿನ ಕಂಬಳ ಕೆರೆಗೆ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ದೈವ, ದೇವರ ಪ್ರಸಾದ ಕಂಬಳ ಕೆರೆಯ ನೀರಿಗೆ ಅರ್ಪಣೆ ಮಾಡಿ, ಯಾವುದೇ ಅಡ್ಡಿ-ಆತಂಕ ಎದುರಾಗದಂತೆ ಪ್ರಾರ್ಥನೆ ಸಲ್ಲಿಸಿ, ದೀಪ ಬೆಳಗಿಸಿ ಕಾಯಿ ಒಡೆದರು.

ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ಸಂಸದ ಸದಾನಂದ ಗೌಡ, ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್​ ರೈ ಸಾಕ್ಷಿಯಾದರು.

ಕಂಬಳ ವೀಕ್ಷಿಸಲು ಬರುವ ವಿವಿಐಪಿಗಳಿಗೆ ಪ್ರತ್ಯೇಕ ಎಂಟ್ರಿ ವ್ಯವಸ್ಥೆ ಮಾಡಲಾಗಿದೆ. ವಿವಿಐಪಿಗಳು ಫನ್ ವರ್ಲ್ಡ್‌ ಕಡೆಯಿಂದ ಪ್ರವೇಶಿಸಬೇಕು. ಯಾವುದೇ ಟಿಕೆಟ್‌ ಇಲ್ಲದೆ ಉಚಿತವಾಗಿ ಪ್ರವೇಶದ ವ್ಯವಸ್ಥೆ ಮಾಡಲಾಗಿದೆ. ಸಂಜೆ 6:30 ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬಳ ಮೈದಾನಕ್ಕೆ ಆಗಮಿಸಲಿದ್ದಾರೆ.

ಕರಾವಳಿ ಕಂಬಳ ಉತ್ಸವಕ್ಕೆ ಅನುಷ್ಕಾ ಶೆಟ್ಟಿ, ಪೂಜಾ ಹೆಗ್ಡೆ, ನಟ ದರ್ಶನ್ ಕಾಂತಾರ ಹೀರೋ ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ಉಪೇಂದ್ರ, ಶಿವಣ್ಣ, ಆಶಿಶ್ ಬಲ್ಲಾಳ್, ರಾಜ್ ಬಿ ಶೆಟ್ಟಿ, ಮೇಘಾ ಶೆಟ್ಟಿ ಸೇರಿದಂತೆ ಹಲವರು ಭಾಗಿಯಾಗುತ್ತಿದ್ದಾರೆ.

ಇಂದು ಮತ್ತು ನಾಳೆ ನಡೆಯಲಿರುವ ಕಂಬಳಕ್ಕೆ ಅನುಷ್ಕಾ ಶೆಟ್ಟಿ, ರಿಷಬ್ ಶೆಟ್ಟಿ, ಪೂಜಾ ಹೆಗ್ಡೆ, ವಿವೇಕ್ ಒಬೆರಾಯ್, ಸೇರಿದಂತೆ ಹಲವು ತಾರೆಯರು ಮೆರಗು ನೀಡಲಿದ್ದಾರೆ.

ಗೆದ್ದ ಕೋಣಗಳಿಗೆ ಬಹುಮಾನ ಇಂತಿದೆ…

  • ಪ್ರಥಮ ಬಹುಮಾನ 16 ಗ್ರಾಂ ಚಿನ್ನ ಹಾಗೂ 1 ಲಕ್ಷ ನಗದು

  • ಎರಡನೇ ಬಹುಮಾನ 8 ಗ್ರಾಂ ಚಿನ್ನ ಹಾಗೂ 50,000 ನಗದು

  • ಮೂರನೇ ಬಹುಮಾನ 4 ಗ್ರಾಂ ಚಿನ್ನ ಹಾಗೂ 25,000 ನಗದು ಸಿಗಲಿದೆ.

kiniudupi@rediffmail.com

No Comments

Leave A Comment