ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ಬೆಂಗಳೂರು: ನಿರಂತರ ಭ್ರೂಣ ಹತ್ಯೆ ಪ್ರಕರಣ – ಐವರು ವೈದ್ಯರು ಸೇರಿ 9 ಮಂದಿಯ ಬಂಧನ
ಬೆಂಗಳೂರು: ಭರ್ಜರಿ ಕಾರ್ಯಾಚರಣೆಯಲ್ಲಿ ನಿರಂತರವಾಗಿ ಭ್ರೂಣ ಹತ್ಯೆ ಮಾಡುತ್ತಿದ್ದ ಆರೋಪದ ಮೇಲೆ 9 ಜನರನ್ನು ಬೆಂಗಳೂರು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಐವರು ವೈದ್ಯರು ಸೇರಿ, 9 ಜನರನ್ನು ಬಂಧಿಸಲಾಗಿದೆ. ಶಿವನಂಜೇಗೌಡ, ವೀರೇಶ್, ನವೀನ್ ಮತ್ತು ನಯನ್ ಹಾಗೂ ವೈದ್ಯರಾದ ಡಾ. ತುಳಸಿರಾಮ್, ಡಾ. ಚಂದನ್ ಬಲ್ಲಾಳ್ ಮತ್ತು ಮೀನಾ, ಲ್ಯಾಬ್ ಟೆಕ್ನೀಶಿಯನ್ ನಿಸ್ಸಾರ್, ಖಾಸಗಿ ಆಸ್ಪತ್ರೆಯ ರಿಸಪ್ಷನಿಷ್ಟ್ ರೀಜ್ಮಾ ಬಂಧಿತ ಆರೋಪಿಗಳು.
ಮೊದಲು ಭ್ರೂಣ ಹತ್ಯೆ ಮಾಡುತ್ತಿದ್ದ ಆರೋಪದ ಮೇಲೆ ಶಿವನಂಜೇಗೌಡ, ವೀರೇಶ್, ನವೀನ್ ಮತ್ತು ನಯನ್ ಎಂಬವರನ್ನ ಬಂಧಿಸಲಾಗಿತ್ತು. ಅವರನ್ನ ವಿಚಾರಣೆಗೆ ಒಳಪಡಿಸಿದ ನಂತರ ಈ ಪ್ರಕರಣದ ಹಿಂದಿರುವ ವೈದ್ಯರ ಹೆಸರು ಕೇಳಿಬಂದಿತು.
ಬಳಿಕ ತನಿಖೆ ಮುಂದುವರಿಸಿದ ಪೊಲೀಸರು ಕೃತ್ಯದ ಹಿಂದಿದ್ದ ಚನ್ನೈ ಮೂಲದ ಡಾ ತುಳಸಿರಾಮ್, ಮೈಸೂರಿನ ಖಾಸಗಿ ಆಸ್ಪತ್ರೆಯ ರಿಸಪ್ಷನಿಷ್ಟ್ ರೀಜ್ಮಾ, ಡಾ.ಚಂದನ್ ಬಲ್ಲಾಳ್ ಮತ್ತು ಪತ್ನಿ ಮೀನಾ, ಲ್ಯಾಬ್ ಟೆಕ್ನೀಶಿಯನ್ ನಿಸ್ಸಾರ್ ಎಂಬವರನ್ನು ಬಂಧಿಸುವಲ್ಲಿ ಯಶಸ್ವಿಯಾದರು.
ಒಟ್ಟು 9 ಮಂದಿ ಸೇರಿ ಮಾಡಿಕೊಂಡು ವ್ಯವಸ್ಥಿತವಾಗಿ ಕೃತ್ಯ ಎಸಗುತ್ತಿದ್ದರು. ಪ್ರತಿ ತಿಂಗಳು 20 ರಿಂದ 25 ಭ್ರೂಣ ಹತ್ಯೆ ಮಾಡುತ್ತಿದ್ದರು. ಮೈಸೂರಿನ ಉದಯಗಿರಿಯಲ್ಲಿರುವ ಆಸ್ಪತ್ರೆಯೊಂದರಲ್ಲಿ ಈ ಕೃತ್ಯ ನಡೆಯುತ್ತಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.