ಚಿಕ್ಕಮಗಳೂರು: ಡಿಸೆಂಬರ್ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್
ಮಂಗಳೂರು: ಓಟ ಸ್ಪರ್ಧೆಯಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ಮಂಗಳೂರು: ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಸೋತಿದ್ದರಿಂದ ಖಿನ್ನತೆಗೆ ಜಾರಿದ್ದ ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಪುತ್ತೂರಿನ ಸಂಪ್ಯ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು ಮೃತ ವಿದ್ಯಾರ್ಥಿನಿಯನ್ನು 17 ವರ್ಷದ ನಿಶಾ ಎಂದು ಗುರುತಿಸಲಾಗಿದೆ. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ನಿಶಾ, ಎರಡು ವಾರದ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ರನ್ನಿಂಗ್ ರೇಸ್ನಲ್ಲಿ ಭಾಗವಹಿಸಿದ್ದಳು.
ಸ್ಪರ್ಧೆಯಲ್ಲಿ ಬಹುಮಾನ ಸಿಗದಿದ್ದಕ್ಕೆ ಬೇಸರಗೊಂಡಿದ್ದ ನಿಶಾ ಇದರಿಂದ ಖಿನ್ನತೆಗೆ ಒಳಗಾಗಿದ್ದಳು. ಹೀಗಾಗಿ ವಾರದ ಹಿಂದೆ ಮನೆಯಲ್ಲಿದ್ದ ಕೀಟನಾಶಕ ಸೇವಿಸಿದ್ದಳು.
ತೀವ್ರವಾಗಿ ಅಸ್ವಸ್ಥಳಾಗಿದ್ದ ನಿಶಾಳನ್ನು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಶಾ ಮೃತಪಟ್ಟಿದ್ದಾಳೆ.