ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ವಾಹನ ಸವಾರರ ಗಮನಕ್ಕೆ: ಬೆಂಗಳೂರಿನಲ್ಲಿಂದು ಸಾಲು-ಸಾಲು ಪ್ರತಿಭಟನೆ, ಪರ್ಯಾಯ ಮಾರ್ಗಕ್ಕೆ ಸೂಚನೆ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಮತ್ತು ಮಂಗಳವಾರ ಸಾಲು ಸಾಲು ಪ್ರತಿಭಟನೆ ಹಾಗೂ ಹೋರಾಟಗಳು ನಡೆಯಲಿದ್ದು. ಈ ಹಿನ್ನೆಲೆಯಲ್ಲಿ ನಗರದ ವಿವಿಧ ಮಾರ್ಗಗಳಲ್ಲಿ ವಾಹನ ಸಂಚಾರ ದಟ್ಟಣೆಯಾಗುವ ಸಾಧ್ಯತೆಗಳಿವೆ. ವಾಹನ ಸವಾರರು, ಪರ್ಯಾಯ ಮಾರ್ಗ ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.
ನಗರದಲ್ಲಿ ಸಂಯುಕ್ತ ಹೋರಾಟ ಸಮಿತಿ ಸೇರಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಹಾಗೂ ರಾಜಭವನ ಚಲೋ ನಡೆಯಲಿವೆ.
ಈ ಹಿನ್ನೆಲೆಯಲ್ಲಿ ಕೆ.ಜಿ. ರಸ್ತೆ ಮೂಲಕ ಮೈಸೂರು ಬ್ಯಾಂಕ್ ವೃತ್ತದಿಂದ ಬಲಕ್ಕೆ ತಿರುವು ಪಡೆದು ಫ್ರೀಡಂ ಪಾರ್ಕ್ ಕಡೆಗೆ ಬರುವ ವಾಹನಗಳು ಪ್ಯಾಲೇಸ್ ಕ್ರಾಸ್ ರಸ್ತೆಯ ಮಹಾರಾಣಿ ಕೆಳಸೇತುವೆ ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಫ್ರೀಡಂ ಪಾರ್ಕ್ ಜಂಕ್ಷನ್‌ನಿಂದ ಕನದಾಸ ವೃತ್ತದ ಕಡೆಗೆ ಬರುವ ಹಾಗೂ ಹೋಗುವ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಸುಬ್ಬಣ್ಣ ಜಂಕ್ಷನ್‌ನಿಂದ ಎಂಟಿಆರ್ ಜಂಕ್ಷನ್ ಕಡೆಗೆ ಬರುವ ರಸ್ತೆಯು ಹಾಲಿ ಏಕಮುಖ ಸಂಚಾರ ರಸ್ತೆಯಾಗಿದ್ದು ತಾತ್ಕಾಲಿಕವಾಗಿ ದ್ವಿಮುಖ ಸಂಚಾರ ರಸ್ತೆಯನ್ನಾಗಿ ಪರಿವರ್ತಿಸಲಾಗಿದೆ ಎಂದು ತಿಳಿಸಿದ್ದಾರೆ.
ಖೋಡೆ ಜಂಕ್ಷನ್‌ನಿಂದ ಮಹಾರಾಣಿ ಜಂಕ್ಷನ್‌ವರೆಗೆ, ವೈ.ರಾಮಚಂದ್ರ ರಸ್ತೆ, ಕಾಳಿದಾಸ ರಸ್ತೆ, ಪ್ಯಾಲೇಸ್ ರಸ್ತೆ, ಕೆಜಿ ರಸ್ತೆಗಳಲ್ಲಿ ಯಾವುದೇ ಮಾದರಿ ವಾಹನಗಳಿಗೆ ನಿಲುಗಡೆಗೆ ಅವಕಾಶ ಇರುವುದಿಲ್ಲ ಎಂದು ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.