ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.
ಸಿಎಂ ಅಪರ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಎಲ್. ಕೆ ಅತೀಕ್ ನೇಮಕ
ಬೆಂಗಳೂರು: ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ಅವರನ್ನು ನೇಮಕ ಮಾಡಲಾಗಿದೆ.
ಈವರೆಗೂ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅತೀಕ್ ಅವರು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಜತೆಗೆ ಹಣಕಾಸು ಇಲಾಖೆಯ ಹುದ್ದೆಯಲ್ಲೂ ಮುಂದುವರಿಯಲಿದ್ದಾರೆ.
ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯರ್ಶಿಯಾಗಿದ್ದ ರಜನೀಶ್ ಗೋಯಲ್ ಅವರನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಿದೆ. ನವೆಂಬರ್ 30ರಂದು ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಅಧಿಕಾರ ವಹಿಸಿಕೊಳ್ಳಲಿದ್ಧಾರೆ.
ಲುತಾಫುಲ್ಲಾ ಖಾನ್ ಅವರು ತುಮಕೂರು ಜಿಲ್ಲೆ ಪಾವಗಡದವರು. 1991ನೇ ಬ್ಯಾಚ್‌ನ ಐಎಎಸ್ ಅಧಿಕಾರಿ. ಮಂಗಳೂರು ಎಸಿಯಾಗಿ ನಂತರ ಮಂಡ್ಯ, ಹಾಸನ ಡಿಸಿಯಾಗಿದ್ದವರು. ಸರ್ವ ಶಿಕ್ಷಾ ಅಭಿಯಾನದ ಯೋಜನಾ ನಿರ್ದೇಶಕರೂ ಆಗಿದ್ದರು.
ಕೇಂದ್ರ ಸರ್ಕಾರದ ಸೇವೆಯಲ್ಲಿ ಪ್ರಧಾನ ಮಂತ್ರಿಗಳ ಕಚೇರಿಯಲ್ಲಿಯೂ ಸೇವೆ ಸಲ್ಲಿಸಿದರು. ವಿಶ್ವ ಬ್ಯಾಂಕ್ ಕಾರ್ಯ ನಿರ್ವಾಹಕ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸಿದ ಅನುಭವವಿದೆ. ಕರ್ನಾಟಕದಲ್ಲಿ ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಯೂ ಸೇರಿ ಹಲವು ಇಲಾಖೆಗಳಲ್ಲಿ ಕೆಲಸ ಮಾಡಿದ್ದಾರೆ. 2025ರ ಜನವರಿಯಲ್ಲಿ ನಿವೃತ್ತರಾಗಲಿದ್ದಾರೆ.