ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ವಾಪಸ್: ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್
ಬೆಂಗಳೂರು, (ನವೆಂಬರ್ 29): ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆ ವಾಪಸ್ ಪಡೆದುಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಆದ್ರೆ, ಇತ್ತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಸರ್ಕಾರದ ನಡೆಯನ್ನು ಪ್ರಶ್ನಿಸಿ ಹೈಕೋರ್ಟ್ಗೆ (Karnataka High Court)ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ಯತ್ನಾಳ್ ನುಡಿದಂತೆ ನಡೆದಿದ್ದಾರೆ.
ವಿಚಾರಣೆಗೆ ಬಾಕಿ ಇರುವಾಗ ಮೇಲ್ಮನವಿಯಲ್ಲೇ ಮಧ್ಯಂತರ ಅರ್ಜಿ ಸಲ್ಲಿಕೆ ಮಾಡಿದ್ದು, ಹೈಕೋರ್ಟ್ ವಿಚಾರಣೆಯನ್ನು ನಿಷ್ಪಲಗೊಳಿಸಲು ಯತ್ನಿಸಲಾಗುತ್ತಿದೆ. ಸಿಬಿಐ ತನಿಖೆ ಬಹುತೇಕ ಮುಕ್ತಾಯದ ಹಂತದಲ್ಲಿದೆ. ಈ ಹಂತದಲ್ಲಿ ಸರ್ಕಾರದ ಕ್ರಮ ಕಾನೂನುಬಾಹಿರವಾಗಿದ್ದು, ಸಿಬಿಐ ತನಿಖೆಯನ್ನು ಮೊಟಕುಗೊಳಿಸುವ ಉದ್ದೇಶ ಹೊಂದಿದೆ. ಈ ಮೂಲಕ ನ್ಯಾಯಾಂಗದ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪದ ಯತ್ನ ನಡೆದಿದೆ. ಹೀಗಾಗಿ ಸರ್ಕಾರದ ಕ್ರಮಕ್ಕೆ ಸೀಮಿತವಾಗಿ ತಮ್ಮ ವಾದ ಆಲಿಸಲು ಯತ್ನಾಳ್ ಮನವಿ ಮಾಡಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಪ್ರಸ್ತುತ ಕರ್ನಾಟಕ ಡಿಸಿಎಂ ಆಗಿರುವ ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ತನಿಖೆಗೆ ನಡೆಸಲು ಹಿಂದಿನ ಬಿಜೆಪಿ ಸರ್ಕಾರ (BJP Govt) ಸಿಬಿಐಗೆ (CBI) ಅನುಮತಿ ನೀಡಿತ್ತು. ಆದರೆ ಇದೀಗ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ (Karnataka Congress Govt) ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಯಿಂದ ವಾಪಸ್ ಪಡೆಯಲು ನಿರ್ಧರಿಸಿದೆ.
ನವೆಂಬರ್ 23ರಂದು ನಡೆದ ರಾಜ್ಯ ಸಚಿವ ಸಂಪುಟದಲ್ಲಿ ಒಮ್ಮತದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಕಾನೂನು ಸಚಿವ ಎಚ್‌ಕೆ ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದರು. ಈ ವಿಚಾರ ಗೊತ್ತಾಗುತ್ತಿದ್ದಂತೆ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದಿದ್ದು, ಸಿಎಂ ಸಿದ್ದರಾಮಯ್ಯ (CM Siddarmaiah) ಅವರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಈ ಬಗ್ಗೆ ಕೋರ್ಟ್ಗೆ ಹೋಗುವುದಾಗಿ ಯತ್ನಾಳ್ ಹೇಳಿದ್ದರು. ಇದೀಗ ಅದರಂತೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.