ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಳಗಾವಿ ಅಧಿವೇಶನ: ಪೊಲೀಸ್ ವಾಸ್ತವ್ಯಕ್ಕೆ 2 ಕೋಟಿ ರೂ. ವೆಚ್ಚದಲ್ಲಿ 4 ಜರ್ಮನ್ ಟೆಂಟ್ ನಿರ್ಮಾಣ

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4 ರಿಂದ 15 ರವರೆಗೆ ಚಳಿಗಾಲದ ಅಧಿವೇಶನ ನಡೆಯಲಿದ್ದು, ಭದ್ರತೆಗಾಗಿ 5 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ಪೊಲೀಸ್ ಸಿಬ್ಬಂದಿಯ ವಾಸ್ತವ್ಯಕ್ಕೆ ಸುಮಾರು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನಾಲ್ಕು ಬೃಹತ್ ಜರ್ಮನ್ ಟೆಂಟ್​ಗಳನ್ನು ನಿರ್ಮಿಸಲಾಗುತ್ತಿದೆ.

ಒಂದು ಜರ್ಮನ್ ಟೆಂಟ್​ 100 ಅಡಿ ಅಗಲ, 200 ಅಡಿ ಉದ್ದ ಇರಲಿದೆ. ನಾಲ್ಕು ದೊಡ್ಡ ಮತ್ತು ಒಂದು ಚಿಕ್ಕ ಟೆಂಟ್ ನಿರ್ಮಿಸಲಾಗುತ್ತಿದೆ. ಒಂದು ಬೃಹತ್ ಟೆಂಟ್​ನಲ್ಲಿ 500 ಸಿಬ್ಬಂದಿ ಮಲಗಲು ವ್ಯವಸ್ಥೆ ಇರಲಿದೆ. ಸಿಂಗಲ್ ಕಾಟ್ ಜೊತೆ ಬೆಡ್-ದಿಂಬು, ಬೆಡ್​​ಶೀಟ್, ಹಾಸಿಗೆ, ಚಾರ್ಜಿಂಗ್ ವ್ಯವಸ್ಥೆ ಇರಲಿದೆ.

ಹಿರಿಯ ಅಧಿಕಾರಿಗಳಿಗಾಗಿ ಚಿಕ್ಕ ಟೆಂಟ್ ನಿರ್ಮಾಣ ಮಾಡಲಾಗಿದೆ. ಏಕಕಾಲದಲ್ಲಿ 2 ಸಾವಿರ ಜನರು ಮಲಗಬಹುದಾಗಿದೆ. ಪಾಳಿ ಕೆಲಸ ಮಾಡೋದರಿಂದ ಯಾವುದೇ ತೊಂದರೆ ಆಗಲ್ಲ ಎಂದು ಅವರು ತಿಳಿಸಿದ್ದಾರೆ.

kiniudupi@rediffmail.com

No Comments

Leave A Comment