ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಮಂಡ್ಯ ಆರೋಗ್ಯ ಇಲಾಖೆ ಅಧಿಕಾರಿ ನಟರಾಜ್ ಬೆಂಗಳೂರಿನಲ್ಲಿ ನೇಣುಬಿಗಿದು ಆತ್ಮಹತ್ಯೆ
ಬೆಂಗಳೂರು, ಡಿ.2: ಭ್ರೂಣ ಹತ್ಯೆ ಪ್ರಕರಣದಲ್ಲಿ ಹೆಸರು ಕೇಳಿಬಂದ ಮಂಡ್ಯದ (Mandya) ವೈದ್ಯ ಸತೀಶ್ ಕೊಡಗಿನಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಬೆನ್ನಲ್ಲೇ ಮಂಡ್ಯ ಆರೋಗ್ಯ ಇಲಾಖೆ ಅಧಿಕಾರಿ ನಟರಾಜ್ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ನಟರಾಜ್ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ಬೆಂಗಳೂರು ನಗರದ ಮಹಾಲಕ್ಷ್ಮೀ ಲೇಔಟ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ನಟರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಹೃದಯಾಘಾತವಾಗಿದ್ದ ಹಿನ್ನೆಲೆ ನಟರಾಜ್ ರಜೆಯಲ್ಲಿದ್ದರು. ಇಂದು ಮಂಡ್ಯಕ್ಕೆ ಹೋಗಿ ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಬೇಕಿತ್ತು. ಆದರೆ ಮಂಡ್ಯ ಡಿಹೆಚ್ಒ ರಿಪೋರ್ಟ್ ಮಾಡಿಕೊಳ್ಳದಂತೆ ಸೂಚನೆ ನೀಡಿದ್ದಾರೆ.
ಇದರಿಂದ ಬೇಸತ್ತು ಡಾ.ನಟರಾಜ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.