ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
‘ಎಲ್ಲಾ ನಾಟಕ ಮಾಡೋದು, ಎಲ್ಲಾ ಹುದ್ದೆ ತಮ್ಮ ಮಕ್ಕಳಿಗೆ ಬೇಕು’- ಬಿಎಸ್‌ವೈ ವಿರುದ್ಧ ಯತ್ನಾಳ್ ಆಕ್ರೋಶ
ವಿಜಯಪುರ:ಡಿ 02:ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಗುಡುಗಿದ್ದಾರೆ.
ನಮ್ಮ ಮನೆಗೆ ಬರಬೇಡ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ ಯತ್ನಾಳ್. ಇದೀಗ ಮಗ ಬಿವೈ ವಿಜಯೇಂದ್ರ ಅವರಿಗೆ ಅಧ್ಯಕ್ಷ ಪಟ್ಟ ಸಿಕ್ಕಿದ್ದಕ್ಕೆ ಬಿಎಸ್ ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೊದಲು ಮಾಜಿ ಮುಖ್ಯಮಂತ್ರಿ ಅಂತಿದ್ದರು. ಮುಖಭಂಗ ಆಗುತ್ತೆ ಅಂತಾ ಈಗ ನಿಕಟಪೂರ್ವ ಎಂದು ಹೇಳುತ್ತಾರೆ. ಅಪ್ಪ, ಮಗ ನಾಟಕ ಮಾಡಬೇಡಿ ಅಂತಾ ಈ ಹಿಂದೆ ನಾನು ಹೇಳಿದ್ದೆ ಎಂದು ಕಿಡಿಕಾರಿದರು.
ಎಲ್ಲಾ ನಾಟಕ ಮಾಡೋದು, ಎಲ್ಲಾ ಹುದ್ದೆ ತಮ್ಮ ಮಕ್ಕಳಿಗೆ ಬೇಕು. ಯಾಕಂದ್ರೆ ಆ ಖುರ್ಚಿ ಬಿಡಬಾರದು ಅಂತ. ರೈತರ ಬಗ್ಗೆ ಕಣ್ಣೀರು ಹಾಕೋದು ನೋಡಿದರೇ ಎಲ್ಲಾ ನಾಟಕ ಮಾಡೋದು, ಎಲ್ಲಾ ಹುದ್ದೆ ತಮ್ಮ ಮಕ್ಕಳಿಗೆ ಬೇಕು. ಇನ್ನು ಏನಾದರೂ ಉಳಿದಿದ್ದರೇ ಮನೆಯ ಬೆಕ್ಕುಗಳಿಗೆ ಕೊಟ್ಟು ಬಿಡಿ ಅಂತ ಹೇಳಿದ್ದೇನೆ. ಪ್ರಧಾನ ಕಾರ್ಯದರ್ಶಿ, ಉಪ ಕಾರ್ಯದರ್ಶಿ ಅಂತ ಮಾಡಿಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.