ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಮಂಗಳೂರು: ನಾಲ್ಕ ತಿಂಗಳ ಮಗುವನ್ನು ನೀರಿನ ಟಬ್ ನಲ್ಲಿ ಮುಳುಗಿಸಿ ಕೊಂದು ತಾಯಿ ಆತ್ಮಹತ್ಯೆ
ಮಂಗಳೂರು: ನಾಲ್ಕು ತಿಂಗಳ ಮಗುವನ್ನು ನೀರು ತುಂಬಿದ ಪ್ಲಾಸ್ಟಿಕ್ ಟಬ್ ನಲ್ಲಿ ಮುಳುಗಿಸಿ ಕೊಂದ ತಾಯಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ. ಗುಜ್ಜರಕೆರೆಯ ಮುಹಮ್ಮದ್ ಉನೈಸ್ ಎಂಬವರ ಪತ್ನಿ ಫಾತಿಮಾ ರುಕಿಯಾ (23) ಮತ್ತು ನಾಲ್ಕು ತಿಂಗಳ ಮಗು ಅಬ್ದುಲ್ಲಾ ಮೃತರು ಎಂದು ಗುರುತಿಸಲಾಗಿದೆ.
ಫಾತಿಮಾ ರುಕಿಯಾ ಅವರು ಸುಮಾರು ಒಂದೂವರೆ ವರ್ಷದ ಹಿಂದೆ ಮುಹಮ್ಮದ್ ಉನೈಸ್ ಎಂಬವರನ್ನು ವಿವಾಹವಾಗಿದ್ದರು. 2023 ಜುಲೈ 7 ರಂದು ಹೆರಿಗೆಯಾಗಿತ್ತು. ಇವರಿಗೆ ಅಬ್ದುಲ್ಲಾ ಹೂದ್ ಎಂಬ ಮಗು ಇತ್ತು. ಹೆರಿಗೆಯಾದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದು,ಫಾತಿಮಾ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತನ್ನ ತಾಯಿ ಬಳಿ ಹೇಳುತ್ತಿದ್ದರು ಎನ್ನಲಾಗಿದೆ.
ಇಂದು ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ಸಮಯ ಫಾತಿಮಾ ರುಕಿಯಾ ತಾನು ವಾಸವಾಗಿದ್ದ ಮಂಗಳೂರು ನಗರದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟ್ನ ಫ್ಲಾಟ್ ನಂಬರ್ 507ರ ಬೆಡ್ ರೂಮ್ನ ಗ್ಯಾಲರಿಯಲ್ಲಿ ಪ್ಲಾಸ್ಟಿಕ್ ಟಬ್ನಲ್ಲಿ ನೀರು ತುಂಬಿಸಿ ಮಗುವನ್ನು ನೀರಿನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಳೆ.
ಬಳಿಕ ತಾನೂ ಕೂಡ ರೂಮಿನ ಕಿಟಕಿಯ ಕಬ್ಬಿಣದ ಸರಳಿಗೆ ಸೀರೆಯಿಂದ ಕಟ್ಟಿ ಮತ್ತೊಂದು ತುದಿಯಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.