`````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಓದುಗರಿಗೆ ಮತ್ತು ನಮ್ಮ ಜಾಹೀರಾತುದಾರರಿಗೆ ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯಗಳು``````````````
ಕಾಂಗ್ರೆಸ್ ನ ಸುಳ್ಳು ಗ್ಯಾರಂಟಿಗಳನ್ನು ಜನ ನಂಬಲ್ಲ ಎನ್ನುವುದು ಸಾಬೀತಾಗಿದೆ – ಶೋಭಾ ಕರಂದ್ಲಾಜೆ
ನವದೆಹಲಿ:ಡಿ 03, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢದಲ್ಲೂ ಬಿಜೆಪಿಗೆ ಐತಿಹಾಸಿಕ ಜಯ ಸಿಕ್ಕಿದೆ. ಕಾಂಗ್ರೆಸ್‌ನ ಸುಳ್ಳು ಗ್ಯಾರಂಟಿಗಳನ್ನು ಜನರು ನಂಬಲ್ಲ ಎನ್ನುವುದು ಸಾಬೀತಾಗಿದೆ. ಇದಕ್ಕಾಗಿ ನಮ್ಮ ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
5 ರಾಜ್ಯಗಳ ಪೈಕಿ 3 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿರುವ ಹಿನ್ನೆಲೆ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 3 ರಾಜ್ಯಗಳ ಜನರು ಬಿಜೆಪಿಗೆ ಮತ ನೀಡಿ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಿದ್ದಾರೆ. ಕಾಂಗ್ರೆಸ್‌ನವರ ಗ್ಯಾರಂಟಿ ಅದು ಗ್ಯಾರಂಟಿಯಲ್ಲ, ಮೋಸವೆಂಬುದು ಸಾಬೀತಾಗಿದೆ ಎಂದರು.
ಇನ್ನು ಮುಂದೆ ತೆಲಂಗಾಣ ರಾಜ್ಯ ಸೇರಿದಂತೆ ಹಲವು ದಕ್ಷಿಣ ಭಾರತದ ರಾಜ್ಯಗಳಲ್ಲಿ ನಮ್ಮ ಪಕ್ಷವನ್ನು ಬಲಪಡಿಸಬೇಕಿದೆ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ 25ಕ್ಕೂ ಹೆಚ್ಚು ಸ್ಥಾನವನ್ನು ನಾವು ಗೆಲ್ಲುತ್ತೇವೆ ಎಂದು ಅವರು ತಿಳಿಸಿದ್ದಾರೆ.