Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ತೆಲಂಗಾಣ: ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನ, ಪೈಲಟ್ ಗಳ ದುರಂತ ಸಾವು

ಹೈದರಾಬಾದ್: ಭಾರತೀಯ ವಾಯುಪಡೆಯ (ಐಎಎಫ್) ತರಬೇತಿ ವಿಮಾನವು ತೆಲಂಗಾಣದಲ್ಲಿ ಪತನವಾಗಿದ್ದು ವಿಮಾನದಲ್ಲಿದ್ದ ಪೈಲಟ್ ಗಳು ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ತೆಲಂಗಾಣದ ತೂಪ್ರಾನ್‌ನ ರಾವೆಲ್ಲಿ ಗ್ರಾಮದ ಹೊರವಲಯದಲ್ಲಿ ಸೋಮವಾರ ಬೆಳಗ್ಗೆ Pilatus ವಿಮಾನ ಪತನಗೊಂಡಿದೆ. ದುರಂತದ ವೇಳೆ ವಿಮಾನದಲ್ಲಿ ಎಷ್ಟು ಮಂದಿ ಇದ್ದರು ಎಂಬುದು ತಕ್ಷಣಕ್ಕೆ ಖಚಿತವಾಗಿಲ್ಲ. ಅಪಘಾತದ ನಂತರ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ವಿಮಾನವು ಸುಟ್ಟು ಬೂದಿಯಾಗಿದೆ.

ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಐಎಎಫ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಪೈಲಟ್ ಗಳು ಸಾವನ್ನಪ್ಪಿದ್ದಾರೆ. ಪೈಲಟ್‌ಗಳಲ್ಲಿ ಒಬ್ಬ ಬೋಧಕ ಮತ್ತು ಒಬ್ಬ ಕೆಡೆಟ್ ಇದ್ದಾರೆ ಎಂದು ಹೇಳಲಾಗಿದೆ. ಸ್ಥಳಕ್ಕೆ ದೌಡಾಯಿಸಿರುವ ರಕ್ಷಣಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

No Comments

Leave A Comment