ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ನಾವೇನು ಉತ್ತರ ಕರ್ನಾಟಕದವರು ಗಂಟೆ ಹೊಡಿಬೇಕಾ? ರಾಜ್ಯಾಧ್ಯಕ್ಷ ಬದಲಾಗೋವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ!

ಬೆಳಗಾವಿ: ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವ ವರೆಗೆ ಬಿಜೆಪಿ ಶಾಸಕಾಂಗ ಸಭೆಗೆ ಹಾಜರಾಗಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸೋಮವಾರ ಮಾತನಾಡಿದ ಅವರು, ಬಿಜೆಪಿಯಲ್ಲಿ ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ನೀಡಿಲ್ಲ. ದಕ್ಷಿಣ ಕರ್ನಾಟಕದವರ ಗುಲಾಮರು ನಾವಲ್ಲ ಎಂದು ಬಿಜೆಪಿ‌ ಅಧ್ಯಕ್ಷ ಸ್ಥಾನ ಹಾಗೂ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಸದನದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ ಬಗ್ಗೆ ಚರ್ಚೆ ಆಗಲಿ. ದಕ್ಷಿಣ ಕರ್ನಾಟಕಕ್ಕೆ ನ್ಯಾಯ ಕೊಟ್ರು, ಆ ಭಾಗದ ನಾಯಕರಿಗೆ ನಾವು ಗುಲಾಮರಲ್ಲ. ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಎಲ್​ಪಿ(ಬಿಜೆಪಿ ಶಾಸಕಾಂಗ) ಸಭೆಗೆ ಬರಲ್ಲ ಎಂದು ಖಂಡ ತುಂಡವಾಗಿ ಹೇಳಿದರು.

ಮುಖ್ಯಮಂತ್ರಿ ಹಳೆ ಮೈಸೂರು ಭಾಗ, ಉಪಮುಖ್ಯಮಂತ್ರಿಯ ಹಳೆ ಮೈಸೂರು ಭಾಗ, ವಿರೋಧ ಪಕ್ಷದ ನಾಯಕ ಹಳೆ ಮೈಸೂರು ಭಾಗ, ಬಿಜೆಪಿ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷ ಹಳೆ ಮೈಸೂರು ಭಾಗ ಮತ್ತು ಬೆಂಗಳೂರಿನವರು. ನಾವೇನು ಉತ್ತರ ಕರ್ನಾಟಕದವರು ಗಂಟೆ ಹೊಡಿಬೇಕಾ? ನಮಗೆ ನ್ಯಾಯ ಸಿಗುವವರೆಗೂ ಯಾವುದೇ ಹೋರಾಟಕ್ಕೂ ನಾನು ಸಿದ್ಧ. ಯಾವ ಸ್ಥಾನವನ್ನು ತ್ಯಾಗವನ್ನು ಬೇಕಾದರೂ ಮಾಡುತ್ತೇನೆ ಎಂದು ಪರೋಕ್ಷವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ರೆಡಿ ಎನ್ನುವ ಅರ್ಥದಲ್ಲಿ ಹೇಳಿದರು.

ನರೇಂದ್ರ ‌ಮೋದಿ ನಾಯಕತ್ವ ಇಡೀ ದೇಶದ ಜನರು ಒಪ್ಪಿಕೊಂಡಿದ್ದಾರೆ. ನರೇಂದ್ರ ‌ಮೋದಿ ದೇಶಕ್ಕೆ ಗ್ಯಾರಂಟಿ ಇರುವುದಿಂದ ಗೆಲುವುವಾಗಿದೆ. ಹೊಂದಾಣಿಕೆ ‌ಇಲ್ಲದ ರಾಜಕಾರಣ, ‌ಹಿಂದುತ್ವ ಅಭಿವೃದ್ಧಿ ಕಾರಣವಾಗಿದೆ ಎಂದರು. ಕುಟುಂಬ ರಾಜಕಾರಣ ಕಿತ್ತು ಹಾಕಬೇಕು. ಇಡೀ ದೇಶದಲ್ಲಿ ಕುಟುಂಬ ರಾಜಕಾರಣ ಅಂತ್ಯವಾಗುತ್ತದೆ. ವಂಶವಾದವನ್ನು ನಿರ್ಮೂಲನೆ ಮಾಡುವುದೇ ನನ್ನ ಗುರಿ. ಇನ್ನು ಮೇಲೆ ಬದಲಾವಣೆ ಆಗುತ್ತದೆ.

kiniudupi@rediffmail.com

No Comments

Leave A Comment