Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಬಿಜೆಪಿ ಎಂಎಲ್ಸಿ ಸಿಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಶವವಾಗಿ ಪತ್ತೆ!

ಬೆಂಗಳೂರು: ಬಿಜೆಪಿ ಎಂಎಲ್ ಸಿ ಸಿಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರ ಮೃತದೇಹ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಚಾಮರಾಜನಗರದ ಹನೂರು ತಾಲೂಕಿನ ರಾಮಾಪುರ ಗ್ರಾಮದ ನಿರ್ಜನ ಪ್ರದೇಶದಲ್ಲಿ ಮಹದೇವಯ್ಯ ಅವರ ಮೃತದೇಹ ಇದೀಗ ಪತ್ತೆಯಾಗಿದ್ದು ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಮಹದೇವಯ್ಯ ಅವರ ಕಾರು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಗ್ರಾಮ ಬಳಿ ಪತ್ತೆಯಾಗಿತ್ತು.

ಹೀಗಾಗಿ ಪೊಲೀಸರು ನಿರ್ಜನ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸಿದ ವೇಳೆ ಮಹದೇವಯ್ಯ ಅವರ ಮೃತದೇಹ ಪತ್ತೆಯಾಗಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಲ್ಲಿ ತಂಗಿದ್ದ 62 ವರ್ಷದ ಮಹದೇವಯ್ಯ ಅವರು ಏಕಾಏಕಿ ನಾಪತ್ತೆಯಾಗಿದ್ದಾರೆ. ಉದ್ಯಮಿ ಹಾಗೂ ಮೆಗಾಸಿಟಿ ನಿರ್ದೇಶಕರಾಗಿರುವ ಮಹದೇವಯ್ಯ ಅವರು ಆಗಾಗ ತೋಟದ‌ ಮನೆಗೆ ಬಂದು ತಂಗುತ್ತಿದ್ದರು. ಆದರೆ ಕಳೆದ ಡಿಸೆಂಬರ್ 2ರಂದು ಡಿಢೀರ್ ಕಾಣೆಯಾಗಿದ್ದಾರೆ. ಮಹದೇವಯ್ಯ ಅವರನ್ನು ಯಾರೋ ಅಪಹರಣ ಮಾಡಿರುವ ಶಂಕೆ ವ್ಯಕ್ತವಾಗಿತ್ತು.

No Comments

Leave A Comment