ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಜಕಾರ್ತ:ಡಿ 4 ,: ಇಂಡೋನೇಷ್ಯಾದ ಮೌಂಟ್ ಮರಾಪಿಯಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದ ಹಿನ್ನಲೆ 11 ಪರ್ವತಾರೋಹಿಗಳು ಸಾವನ್ನಪ್ಪಿದ್ದಾರೆ. 12ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಪಶ್ಚಿಮ ಸುಮಾತ್ರಾದಲ್ಲಿ ಭಾನುವಾರ ಜ್ವಾಲಾಮುಖಿ ಸ್ಫೋಟಗೊಂಡಿದೆ. ಈ ವೇಳೆ ಅಲ್ಲಿ 75 ಜನರು ಇದ್ದರು ಎನ್ನಲಾಗಿದೆ. ಜ್ವಾಲಾಮುಖಿ ಸ್ಫೋಟದ ಬಳಿಕ ರಕ್ಷಣಾ ತಂಡಗಳು ಧಾವಿಸಿ 14 ಜನರನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಮೊದಲು ನಾಪತ್ತೆಯಾಗಿದ್ದವರಲ್ಲಿ ಮೂವರನ್ನು ಜೀವಂತವಾಗಿ ಪತ್ತೆ ಮಾಡಿದ್ದೇವೆ.
11 ಜನರು ಶವವಾಗಿ ಪತ್ತೆಯಾಗಿದ್ದಾರೆ ರಕ್ಷಣಾ ಏಜೆನ್ಸಿಯ ಮುಖ್ಯಸ್ಥ ಅಬ್ದುಲ್ ಮಲಿಕ್ ತಿಳಿಸಿದ್ದಾರೆ.ಇನ್ನೂ ನಾಪತ್ತೆಯದವರ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ.