ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ಮೆಕ್ಕೆಜೋಳ ಮೂಟೆ ಕುಸಿತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ
ವಿಜಯಪುರ:ಡಿ 5, ನಗರದ ರಾಜ್ ಗುರು ಫುಡ್’ ಗೋದಾಮಿನ ಮೆಕ್ಕೆಜೋಳ ಸಂಸ್ಕರಣ ಘಟಕದಲ್ಲಿ ನಡೆದ ದುರಂತದಲ್ಲಿ ಸಾವಿನ ಸಂಖ್ಯೆ ಏಳಕ್ಕೇರಿದೆ.
ಮೃತರನ್ನು ಬಿಹಾರ ಮೂಲದ ಕಾರ್ಮಿಕರಾದ ರಾಮ್ರೀಜ್ ಮುಖಿಯಾ (29), ಶಂಬು ಮುಖಿಯಾ (26), ರಾಮ್ ಬಾಲಕ್ (38), ಲೋಖಿ ಜಾಧವ್ (56), ಕಿಶನ್ ಕುಮಾರ (20), ದಾಲನಚಂದ ಮುಖಿನ, ರಾಜೇಶ್ ಮುಖಿಯಾ (25), ಎಂದು ಗುರುತಿಸಲಾಗಿದೆ.
8 ಜನ ಕಾರ್ಮಿಕರಲ್ಲಿ 7 ಜನ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಎಲ್ಲರ ಮೃತದೇಹ ಹೊರಕ್ಕೆ ತೆಗೆಯಲಾಗಿದೆ. ನಿನ್ನೆ ಸಾಯಂಕಾಲದಿಂದ ಸತತ 17ಗಂಟೆ ಕಾರ್ಯಾಚರಣೆ ನಡೆಸಲಾಗಿದೆ. ರಾಜಗುರು ಫುಡ್ ಮಾಲೀಕ, ಸೂಪರ್ವೈಸರ್ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ ಎಂದು ಎಸ್ಪಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ.