ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಜೈಪುರ: ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೆ ಗುಂಡಿಕ್ಕಿ ಹತ್ಯೆ; ಭಯಾನಕ ವಿಡಿಯೋ ವೈರಲ್

ಜೈಪುರ: ರಾಜಸ್ಥಾನದ ಜೈಪುರದಲ್ಲಿ ಹಾಡಹಗಲೇ ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ರಾಷ್ಟ್ರೀಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಇಂದು ಮಧ್ಯಾಹ್ನ ಶ್ಯಾಮನಗರದಲ್ಲಿರುವ ಸುಖದೇವ್ ಸಿಂಗ್ ಅವರ ಮನೆಗೆ ನುಗ್ಗಿದ ನಾಲ್ವರು ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿ ಅಲ್ಲಿಂದ ಪರಾರಿಯಾಗಿದ್ದಾರೆ.

ಗುಂಡಿನ ದಾಳಿಯಲ್ಲಿ ಸುಖದೇವ್ ಸಿಂಗ್ ಅವರ ಇಬ್ಬರು ಭದ್ರತಾ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ ಎಂದು ರಾಜಸ್ಥಾನ ಪೊಲೀಸ್ ಮಹಾನಿರ್ದೇಶಕ ಉಮೇಶ್ ಮಿಶ್ರಾ ಅವರು ತಿಳಿಸಿದ್ದಾರೆ.

No Comments

Leave A Comment