Log In
BREAKING NEWS >
ಮಾರ್ಚ್ 8ರ೦ದು ಮಹಾಶಿವರಾತ್ರೆ-ಎಲ್ಲಾ ಈಶ್ವರ ದೇವಸ್ಥಾನಗಳಲ್ಲಿ ಭಜನಾ ಸ೦ಕೀರ್ತನೆ ಜರಗಲಿದೆ.....

ಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮಸೂದೆ ಅಂಗೀಕಾರ, ಪಿಒಕೆ ನಮ್ಮದು ಎಂದ ಅಮಿತ್ ಶಾ

ದೆಹಲಿ: ಜಮ್ಮು ಮತ್ತು ಕಾಶ್ಮೀರ ಮೀಸಲಾತಿ ತಿದ್ದುಪಡಿ ಮಸೂದೆ -2023 ಹಾಗೂ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ತಿದ್ದುಪಡಿ ಮಸೂದೆ 2023 ಅನ್ನು ಬುಧವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.

ಇಂದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಈ ಎರಡು ಮಸೂದೆಗಳನ್ನು ಮಂಡಿಸಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಮೋದಿ ಸರ್ಕಾರ ಕೇವಲ ಉಗ್ರರನ್ನು ನಿರ್ಮೂಲನೆ ಮಾಡಿಲ್ಲ. ಉಗ್ರರಿಗೆ ಹಣ ನೀಡುತ್ತಿದ್ದ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಲು ಕ್ರಮ ತೆಗೆದುಕೊಂಡಿದೆ ಎಂದು ಅಮಿತ್ ಶಾ ತಿಳಿಸಿದರು.

ಕಾಶ್ಮೀರದ ಈ ಎರಡು ಮಸೂದೆಗಳಲ್ಲಿ ಒಂದು ಮಸೂದೆ ಮಹಿಳೆ ಸೇರಿದಂತೆ ಇಬ್ಬರು ಕಾಶ್ಮೀರಿ ವಲಸಿಗ ಸಮುದಾಯದ ಸದಸ್ಯರನ್ನು ವಿಧಾನಸಭೆಗೆ ನಾಮನಿರ್ದೇಶನ ಮಾಡಲು ಅವಕಾಶ ಕಲ್ಪಿಸುತ್ತದೆ ಎಂದು ಕೇಂದ್ರ ಗೃಹ ಸಚಿವರು ಲೋಕಸಭೆಗೆ ತಿಳಿಸಿದರು.

ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಈ ಎರಡು ಮಸೂದೆಗಳು ಕಳೆದ 70 ವರ್ಷಗಳಿಂದ ತಮ್ಮ ಹಕ್ಕುಗಳಿಂದ ವಂಚಿತರಾದವರಿಗೆ ನ್ಯಾಯವನ್ನು ನೀಡಲಿವೆ ಎಂದು ಅಮಿತ್ ಶಾ ಹೇಳಿದ್ದಾರೆ.

No Comments

Leave A Comment