ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಗುಟ್ಕಾ ಜಾಹೀರಾತು ಪ್ರಕರಣ: ಶಾರುಖ್ ಖಾನ್, ಅಕ್ಷಯ್ ಕುಮಾರ್, ಅಜಯ್ ದೇವಗನ್‌ಗೆ ನೋಟಿಸ್ ಜಾರಿ

ಲಖನೌ: ಗುಟ್ಕಾ ಕಂಪನಿಗಳಿಗೆ ಜಾಹೀರಾತು ನೀಡಿರುವ ಸಂಬಂಧ ನಟರಾದ ಅಕ್ಷಯ್ ಕುಮಾರ್, ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಅಲಹಾಬಾದ್ ಉಚ್ಛ ನ್ಯಾಯಾಲಯದ ಲಖನೌ ಪೀಠಕ್ಕೆ ತಿಳಿಸಿದೆ.

ಸುಪ್ರೀಂ ಕೋರ್ಟ್‌ನಲ್ಲೂ ಇದೇ ವಿಷಯದ ವಿಚಾರಣೆ ನಡೆಯುತ್ತಿದ್ದು, ತ್ವರಿತವಾಗಿ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಕೇಂದ್ರದ ವಕೀಲರು ಶುಕ್ರವಾರ ಹೈಕೋರ್ಟ್‌ಗೆ ತಿಳಿಸಿದರು.

ವಾದವನ್ನು ಆಲಿಸಿದ ನಂತರ, ಪೀಠವು ವಿಚಾರಣೆಯನ್ನು 2024ರ ಮೇ 9 ಕ್ಕೆ ನಿಗದಿಪಡಿಸಿತು.

ನ್ಯಾಯಮೂರ್ತಿ ರಾಜೇಶ್ ಸಿಂಗ್ ಚೌಹಾಣ್ ಅವರಿದ್ದ ಪೀಠವು, ಈ ನಟರು ಉನ್ನತ ಮಟ್ಟದ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಆದರೆ, ಗುಟ್ಕಾ ಕಂಪನಿಗಳಿಗೆ ಜಾಹೀರಾತುಗಳನ್ನು ಮಾಡುವಲ್ಲಿ ತೊಡಗಿಕೊಂಡಿದ್ದಾರೆ. ಹೀಗಾಗಿ, ನಟರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ ಅರ್ಜಿದಾರರ ಪ್ರಾತಿನಿಧ್ಯವನ್ನು ನಿರ್ಧರಿಸಲು ಸೆಪ್ಟೆಂಬರ್ 2022ರಲ್ಲಿ ನ್ಯಾಯಮೂರ್ತಿ ರಾಜೇಶ್ ಸಿಂಗ್ ಚೌಹಾಣ್ ಪೀಠವು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿತ್ತು.

ಅಕ್ಟೋಬರ್ 22ರಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿದಾರರು ವಾದಿಸಿದರು.

ಬಳಿಕ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಕೇಂದ್ರ ಸರ್ಕಾರದ ಸಂಪುಟ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿತ್ತು.

ಶುಕ್ರವಾರ, ಡೆಪ್ಯುಟಿ ಸಾಲಿಸಿಟರ್ ಜನರಲ್ ಎಸ್‌ಬಿ ಪಾಂಡೆ ಅವರು, ನಟರಾದ ಅಕ್ಷಯ್ ಕುಮಾರ್, ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರಿಗೆ ಕೇಂದ್ರವು ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ಹೈಕೋರ್ಟ್‌ಗೆ ತಿಳಿಸಿದರು.

ಗುಟ್ಕಾ ಕಂಪನಿಯೊಂದಿಗಿನ ಒಪ್ಪಂದವನ್ನು ರದ್ದುಗೊಳಿಸಿದ್ದರೂ ಕೂಡ ತಮ್ಮನ್ನು ಒಳಗೊಂಡ ಜಾಹೀರಾತನ್ನು ತೋರಿಸುತ್ತಿರುವುದರ ವಿರುದ್ಧ ನಟ ಅಮಿತಾಬ್ ಬಚ್ಚನ್ ಗುಟ್ಕಾ ಕಂಪನಿಯೊಂದಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

No Comments

Leave A Comment