ಚಿಕ್ಕಮಗಳೂರು: ಡಿಸೆಂಬರ್ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್
ಛತ್ತೀಸ್‌ಗಢ: ಕಾರು-ಟ್ರಕ್ ಮುಖಾಮುಖಿ ಡಿಕ್ಕಿ; ಆಗಷ್ಟೇ ಮದುವೆಯಾಗಿದ್ದ ನವದಂಪತಿ ಸೇರಿ ಐವರ ದುರ್ಮರಣ
ಜಾಂಜ್‌ಗಿರ್: ಛತ್ತೀಸ್‌ಗಢದ ಜಾಂಜ್‌ಗಿರ್-ಚಂಪಾ ಜಿಲ್ಲೆಯಲ್ಲಿ ಭಾನುವಾರ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ನವವಿವಾಹಿತ ದಂಪತಿ ಮತ್ತು ಇತರ ಮೂವರು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಲ್ಮುಲಾ ಪೊಲೀಸ್ ಠಾಣಾ ವ್ಯಾಪ್ತಿಯ ಪಕರಿಯಾ ಜುಲಾನ್ ಗ್ರಾಮದ ಬಳಿ ಮುಂಜಾನೆ ಶಿವನಾರಾಯಣ ಪಟ್ಟಣದಲ್ಲಿ ದಂಪತಿ ವಿವಾಹ ಮುಗಿಸಿ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಜಿಲ್ಲೆಯ ಬಲೋಡಾ ಗ್ರಾಮದ ನಿವಾಸಿ ಶುಭಂ ಸೋನಿ ಶನಿವಾರ ರಾತ್ರಿ ಶಿವನಾರಾಯಣ ಪಟ್ಟಣದ ಯುವತಿಯನ್ನು ವಿವಾಹವಾಗಿದ್ದರು.
ವಧು, ವರ ಮತ್ತು ಇತರ ಮೂವರು ಕುಟುಂಬದ ಸದಸ್ಯರು ಕಾರಿನಲ್ಲಿ ಬಲೋಡಾಗೆ ಹಿಂತಿರುಗುತ್ತಿದ್ದಾಗ, ಎದುರಿನಿಂದ ಬಂದ ಟ್ರಕ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ವಧು ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ವರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಕಾರು ಚಲಾಯಿಸುತ್ತಿದ್ದ ವರನ ತಂದೆ ಓಂಪ್ರಕಾಶ್ ಸೋನಿ ಮೃತಪಟ್ಟವರಲ್ಲಿ ಒಬ್ಬರಾಗಿದ್ದಾರೆ ಎಂದು ಅವರು ಹೇಳಿದರು.
ಈ ಬಗ್ಗೆ ಮಾಹಿತಿ ಪಡೆದ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ವಾಹನವನ್ನು ಬಿಟ್ಟು ಸ್ಥಳದಿಂದ ಪರಾರಿಯಾದ ಟ್ರಕ್ ಚಾಲಕನನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.