ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ಬಿಎಸ್ ಪಿಗೆ ರಾಜಕೀಯ ಉತ್ತರಾಧಿಕಾರಿಯನ್ನು ಘೋಷಿಸಿದ ಮಾಯಾವತಿ
ಲಖನೌ: ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಭಾನುವಾರ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ರಾಜಕೀಯ ಉತ್ತರಾಧಿಕಾರಿ ಎಂದು ಘೋಷಿಸಿದ್ದಾರೆ ಎಂದು ಪಕ್ಷದ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಬಿಎಸ್‌ಪಿಯ ಷಹಜಹಾನ್‌ಪುರ ಜಿಲ್ಲಾ ಘಟಕದ ಮುಖ್ಯಸ್ಥ ಉದಯವೀರ್ ಸಿಂಗ್, ಆಕಾಶ್ ಆನಂದ್ ಅವರನ್ನು ತಮ್ಮ ಉತ್ತರಾಧಿಕಾರಿ ಎಂದು ಮಾಯಾವತಿ ಜಿ ಘೋಷಿಸಿದ್ದು, ಉತ್ತರ ಪ್ರದೇಶ ಹೊರತುಪಡಿಸಿ ಉಳಿದೆಡೆ ಪಕ್ಷ ಸಂಘಟನೆ ಬಲಪಡಿಸುವ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆ ಎಂದು ಅವರು ಹೇಳಿದರು.
ಆದರೆ ಪಕ್ಷದ ಅಧಿಕೃತ ಹೇಳಿಕೆಯು ಅಂತಹ ಯಾವುದೇ ನಿರ್ಧಾರವನ್ನು ಉಲ್ಲೇಖಿಸಿಲ್ಲ. ಜಿಲ್ಲೆಯಲ್ಲಿ ನಡೆದ ಸಭೆಯಲ್ಲಿ ಮಾಯಾವತಿ ಈ ನಿರ್ಧಾರವನ್ನು ಪ್ರಕಟಿಸಿದರು ಎಂದು ಸಿಂಗ್ ಹೇಳಿದರು.
ಮಾಯಾವತಿಯವರ ಕಿರಿಯ ಸಹೋದರ ಆನಂದ್ ಕುಮಾರ್ ಅವರ ಪುತ್ರರಾಗಿರುವ ಆಕಾಶ್ ಆನಂದ್, 2016 ರಲ್ಲಿ ಬಿಎಸ್ಪಿಗೆ ಸೇರ್ಪಡೆಗೊಂಡು 2019 ರಲ್ಲಿ ಲೋಕಸಭಾ ಚುನಾವಣೆಯ ಸಮಯದಲ್ಲಿ ಪಕ್ಷದ ಸ್ಟಾರ್ ಪ್ರಚಾರಕರಲ್ಲಿ ಒಬ್ಬರಾಗಿ ಪ್ರಮುಖವಾಗಿ ಕಾಣಿಸಿಕೊಂಡಿದ್ದರು. ಕಾಂಗ್ರೆಸ್ ಮತ್ತು ಇತರೆ ರಾಜಕೀಯ ಪಕ್ಷಗಳ ಕುಟುಂಬ ರಾಜಕೀಯವನ್ನು ಟೀಕಿಸುತ್ತಿದ್ದ ಮಾಯಾವತಿ ಅವರು ಈಗ ಪಕ್ಷದಲ್ಲಿ ತಮ್ಮ ಸೋದರಳಿಯನಿಗೆ ಪಕ್ಷದ ಉನ್ನತ ಹುದ್ದೆ ನೀಡಿದ್ದಾರೆ.