Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಐಪಿಎಲ್ ಬೆಟ್ಟಿಂಗ್ ಹಗರಣ; ಧೋನಿ ವಿರುದ್ಧ ಅಪಪ್ರಚಾರ ಮಾಡಿದ್ದ ಐಪಿಎಸ್ ಅಧಿಕಾರಿಗೆ 15 ದಿನ ಜೈಲು ಶಿಕ್ಷೆ!

ಐಪಿಎಲ್ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಡಿಯಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ ಅವರಿ​ಗೆ ಮದ್ರಾಸ್ ಹೈಕೋರ್ಟ್ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ.

2013 ರ ಐಪಿಎಲ್ ಬೆಟ್ಟಿಂಗ್ ಹಗರಣಕ್ಕೆ (IPL 2013 Betting Scandal) ಸಂಬಂಧಿಸಿದಂತೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಡಿಯಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ (IPS officer Sampath Kumar) ಅವರಿ​ಗೆ ಮದ್ರಾಸ್ ಹೈಕೋರ್ಟ್ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಾಂಗ ನಿಂದನೆ ಆರೋಪದ ಮೇಲೆ ಈ ಶಿಕ್ಷೆ ವಿಧಿಸಲಾಗಿದೆಯಾದರೂ, ನ್ಯಾಯಮೂರ್ತಿಗಳಾದ ಸುಂದರ್ ಮತ್ತು ಮೋಹನ್ ಅವರಿದ್ದ ವಿಭಾಗೀಯ ಪೀಠವು ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಂಪತ್ ಕುಮಾರ್ ಅವರಿಗೆ 30 ದಿನಗಳ ಕಾಲಾವಕಾಶ ನೀಡಿರುವುದರಿಂದ ಅವರನ್ನು ತಕ್ಷಣವೇ ಜೈಲಿಗೆ ಹಾಕಲಾಗುವುದಿಲ್ಲ.

15 ದಿನಗಳ ಜೈಲು ಶಿಕ್ಷೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ, ನ್ಯಾಯಮೂರ್ತಿ ಎಸ್‌ಎಸ್ ಸುಂದರ್ ಮತ್ತು ನ್ಯಾಯಮೂರ್ತಿ ಸುಂದರ್ ಮೋಹನ್ ಅವರ ಪೀಠವು ನಿವೃತ್ತ ಐಪಿಎಸ್ ಅಧಿಕಾರಿ ಸಂಪತ್ ಕುಮಾರ್‌ಗೆ 15 ದಿನಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತು. ಈ ಹಿಂದೆ ಧೋನಿ, ಝೀ ಮೀಡಿಯಾ, ನಿವೃತ್ತ ಐಪಿಎಸ್ ಅಧಿಕಾರಿ ಸಂಪತ್ ಕುಮಾರ್ ಮತ್ತು ಇತರರ ವಿರುದ್ಧ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಇದರಲ್ಲಿ 2013ರ ಐಪಿಎಲ್‌ನಲ್ಲಿ ನಾನು ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿದ್ದೇನೆ ಎಂದು ದುರುದ್ದೇಶಪೂರಿತ ಹೇಳಿಕೆಗಳು ಮತ್ತು ವರದಿಗಳನ್ನು ನೀಡುತ್ತಿದ್ದಾರೆ ಎಂದು ಧೋನಿ, ಈ ಮೇಲಿನವರ ಮೇಲೆ ಆರೋಪ ಹೊರಿಸಿದ್ದರು.

ಮೊಕದಮ್ಮೆ ಹೂಡಿದ್ದ ಧೋನಿ

ಹಾಗೆಯೇ ಈ ಪ್ರಕರಣದಲ್ಲಿ ಕುಮಾರ್ ಮತ್ತು ಇತರ ಆರೋಪಿಗಳು ತಮ್ಮ ವಿರುದ್ಧ ಸುಳ್ಳು ಹೇಳಿಕೆಗಳನ್ನು ನೀಡದಂತೆ ಅಥವಾ ಪ್ರಕಟಿಸದಂತೆ ತಡೆಯಬೇಕೆಂದು ಧೋನಿ ಕೋರಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನಂತರ, ಝೀ ಮೀಡಿಯಾ, ನಿವೃತ್ತ ಐಪಿಎಸ್ ಅಧಿಕಾರಿ ಸಂಪತ್ ಕುಮಾರ್ ಮತ್ತು ಇತರರು, ಧೋನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವುದನ್ನು ಹೈಕೋರ್ಟ್ ತಡೆ ಹಿಡಿದಿತ್ತು.

ಆ ನಂತರ ಐಪಿಎಸ್ ಅಧಿಕಾರಿ ಹೊರತುಪಡಿಸಿ ಎಲ್ಲರೂ ನ್ಯಾಯಾಲಯದ ಆದೇಶವನ್ನು ಒಪ್ಪಿಕೊಂಡಿದ್ದರು. ಆದರೆ ಆ ಬಳಿಕವೂ ನಿವೃತ್ತ ಐಪಿಎಸ್ ಅಧಿಕಾರಿ ಸಂಪತ್ ಕುಮಾರ್ ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಲೂ ಸಹ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಧೋನಿ ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ತೀರ್ಪು ನೀಡಿದ್ದು, ನಿವೃತ್ತ ಐಪಿಎಸ್ ಅಧಿಕಾರಿಗೆ 15 ದಿನಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

No Comments

Leave A Comment