ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ವಿಜಯಪುರ:ನಡು ರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್ – ಅದೃಷ್ಟವಶಾತ್ ಪ್ರಯಾಣಿಕರೆಲ್ಲಾ ಪಾರು

ವಿಜಯಪುರ: ಬೆಳ್ಳಂಬೆಳಿಗ್ಗೆ ಜನತಾ ಟ್ರಾವೆಲ್ಸ್‌ಗೆ ಸೇರಿದ ಬಸ್ಸು ನಡು ರಸ್ತೆಯಲ್ಲೇ ಹೊತ್ತಿ ಉರಿದು ಸುಟ್ಟು ಕರಕಲಾದ ಘಟನೆ ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

ಬೆಂಗಳೂರಿಂದ ಪ್ರಯಾಣಿಕರನ್ನ ಹೊತ್ತು ವಿಜಯಪುರಕ್ಕೆ ಬರುತ್ತಿದ್ದಾಗ ಬಸ್ಸಿಗೆ ಬೆಂಕಿ ಹತ್ತಿಕೊಂಡಿದೆ.

ಚಕ್ರ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟಗೊಳ್ಳುತ್ತಿದ್ದಂತೆ ಪ್ರಯಾಣಿಕರು ಬಸ್ಸಿನಿಂದ ಕೆಳಗಡೆ ಇಳಿದ ಪರಿಣಾಮ ಯಾವುದೇ ಸಾವು ನೋವು ಸಂಭವಿಸಿಲ್ಲ. ಪ್ರಯಾಣಿಕರ ಬೆಲೆಬಾಳುವ ವಸ್ತುಗಳು, ಬಟ್ಟೆಗಳು ಸುಟ್ಟು ಭಸ್ಮವಾಗಿವೆ. ಗಾಬರಿಗೊಂಡ ಪ್ರಯಾಣಿಕರು ಬೇರೆ ವಾಹನಗಳ ಸಹಾಯದಿಂದ ಊರು ಸೇರಿದ್ದಾರೆ.

ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಮತ್ತು ಅಗ್ನಿ ಶಾಮಕ‌ ದಳ ದೌಡಾಯಿಸಿದ್ದು ಬೆಂಕಿ ನಂದಿಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

No Comments

Leave A Comment