Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಕಡಬ: ಕಾರು-ಸ್ಕೂಟರ್ ಢಿಕ್ಕಿ : ಬಾಲಕ ಸ್ಥಳದಲ್ಲೇ ಮೃತ್ಯು

ಕಡಬ: ಡಿ.16. ಪ್ರೈಮ್ ಟಿವಿ ನ್ಯೂಸ್ : ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ  ಕಳಾರ ಸಮೀಪ ಶುಕ್ರವಾರ ರಾತ್ರಿ ನಡೆದಿದೆ.

ಮೃತ ಬಾಲಕನನ್ನು ಕಳಾರ ನಿವಾಸಿ ಬಿಪಿನ್ (13) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೃತ ಬಾಲಕನ ತಂದೆ ಚಂದ್ರಶೇಖರ ಮತ್ತು ತಂಗಿ ಗಂಭೀರ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶಾಲೆಯ ಕ್ರೀಡೋತ್ಸೋವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಮೃತ ಬಾಲಕನ ಮರಣೋತ್ತರ ಪರೀಕ್ಷೆ ಕಡಬ ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಚಾಲಕ ಪಂಜ ಸಮೀಪದ ಪರಮೇಶ್ವರ ಎಂಬವರ ಅವಾಂತರಕ್ಕೆ ಬಾಲಕ ಪ್ರಾಣ ಕಳೆದುಕೊಳ್ಳುವಂತಾಗಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಕಡಬ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

No Comments

Leave A Comment