ಕಳೆದೆರಡು ದಿನಗಳ ಹಿಂದೆ ಮನೆಯಲ್ಲಿ ಆಟವಾಡುತ್ತಿದ್ದಾಗ ಆಲ್ ಔಟ್ ಸೊಳ್ಳೆ ನಿವಾರಕ ದ್ರಾವಣದ ಬಾಟಲಿ ಆಕಸ್ಮಿಕವಾಗಿ ಬಾಯಿಯಲ್ಲಿ ಇಟ್ಟುಕೊಂಡಿದ್ದು ಅದರದಲ್ಲಿದ್ದ ರಾಸಾಯನಿಕ ದ್ರಾವಣ ದೇಹ ಸೇರಿದೆ. ಪರಿಣಾಮ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ತಕ್ಷಣ ಮಗುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮಗು ಮಂಗಳವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ.