ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಹಿರಿಯ ನಟಿ ಹೇಮಾ ಚೌಧರಿಗೆ ತೀವ್ರ ಅನಾರೋಗ್ಯ; ಐಸಿಯುನಲ್ಲಿ ಚಿಕಿತ್ಸೆ
ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಾ ಚೌಧರಿ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿದೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಹೇಮಾ ಚೌಧರಿಗೆ ಬ್ರೇನ್ ಹ್ಯಾಮರೇಜ್ ಆಗಿದೆ ಎಂದು ತಿಳಿದು ಬಂದಿದೆ. ಕನ್ನಡದ ಹಲವು ಸಿನಿಮಾಗಳಲ್ಲಿ ಹೇಮಾ ನಟಿಸಿದ್ದಾರೆ.
ಎರಡು ದಿನಗಳ ಹಿಂದೆ ಹೇಮಾ ಚೌಧರಿಗೆ ಬ್ರೈನ್ ಹ್ಯಾಮರೇಜ್ ಆಗಿತ್ತು. ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ ಅವರನ್ನು ಇಡಲಾಗಿದೆ. ಹೇಮಾ ಅವರ ಮಗ ಐರ್ಲೆಂಡ್ನಲ್ಲಿ ಇದ್ದಾರೆ. ಅವರ ಆಗಮನಕ್ಕಾಗಿ ಹೇಮಾ ಕಾಯುತ್ತಿದ್ದಾರೆ. ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ತಿಳಿದು ಬಂದಿದೆ. ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.
ಇತ್ತೀಚೆಗೆ ನಟಿ ಲೀಲಾವತಿ ಅವರು ನಿಧನ ಹೊಂದಿದರು. ಇದು ಕನ್ನಡ ಚಿತ್ರರಂಗಕ್ಕೆ ಆದ ದೊಡ್ಡ ನಷ್ಟ. ಅವರ ಮಗ ವಿನೋದ್ ರಾಜ್ಗೆ ಇದು ಸಾಕಷ್ಟು ನೋವು ತಂದಿದೆ. ಲೀಲಾವತಿಯವರ 11ನೇ ದಿನದ ಕಾರ್ಯಕ್ಕೆ ಹೇಮಾ ಅವರು ಆಗಮಿಸಿದ್ದರು. ವಿನೋದ್ ರಾಜ್ಗೆ ಸಾಂತ್ವನ ಹೇಳಿದ್ದರು. ಈಗ ಅವರಿಗೆ ಏಕಾಏಕಿ ಈ ರೀತಿ ಆಗಿದೆ.
70ರ ದಶಕದಲ್ಲೇ ಹೇಮಾ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಆ ಬಳಿಕ ಅವರು ಹಲವು ಸಿನಿಮಾಗಳಲ್ಲಿ ನಟಿಸಿದರು. ಕನ್ನಡ, ತೆಲುಗು, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ್ದಾರೆ. ಧಾರಾವಾಹಿಗಳಲ್ಲೂ ಅವರು ಬಣ್ಣ ಹಚ್ಚಿದ್ದಾರೆ. ‘ಅಮೃತವರ್ಷಿಣಿ’ ಧಾರಾವಾಹಿ ಮೂಲಕ ಲೀಲಾವತಿ ಚೌಧರಿ ಕಿರುತೆರೆ ಲೋಕದಲ್ಲೂ ಮಿಂಚಿದರು. ಈಗ ಅವರಿಗೆ ಅನಾರೋಗ್ಯ ಉಂಟಾಗಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.