Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಅಂಚೆ ಕಚೇರಿಗೆ ಬರುವ ಪತ್ರ, ಕೋರಿಯರ್ ಗಳನ್ನು ತೆರೆದು ನೋಡಲು ಸರ್ಕಾರಿ ಅಧಿಕಾರಿಗಳಿಗೆ ಅವಕಾಶ

ನವದೆಹಲಿ:ಡಿ 20. ದೇಶದಲ್ಲಿ ಅಂಚೆ ಕಚೇರಿಗೆ ಬರುವ ಪತ್ರಗಳನ್ನು ಇನ್ನುಮುಂದೆ ಯಾವುದೇ ಸರ್ಕಾರಿ ಅಧಿಕಾರಿಗಳು ತೆರೆದು ನೋಡುವ ಹಾಗೂ ಮುಟ್ಟುಗೋಲು ಹಾಕುವ ಅಧಿಕಾರ ನೀಡುವ ಮಸೂದೆಗೆ ಲೋಕಸಭೆ ಒಪ್ಪಿಗೆ ನೀಡಿದೆ.

ದೇಶದ ಭದ್ರತೆಯ ದೃಷ್ಟಿಯಿಂದ ಈ ಮಸೂದೆಗೆ ಒಪ್ಪಿಗೆಯನ್ನು ನೀಡಲಾಗಿದ್ದು ಪತ್ರಗಳು ಮಾತ್ರವಲ್ಲದೇ ಖಾಸಗಿ ಕೊರಿಯರ್ ಗಳನ್ನೂ ಈ ಮಸೂದೆ ವ್ಯಾಪ್ತಿಗೆ ತರಲಾಗಿದೆ.

ಈ ಮಸೂದೆ ಪ್ರಕಾರ ಕೊರಿಯರ್ ಕಚೇರಿಗೆ ಬರುವ ಶಂಕಾಸ್ಪದ ಪತ್ರಗಳನ್ನು ಅಥವಾ ಯಾವುದೇ ವಸ್ತುಗಳನ್ನು ತೆರೆದು ನೋಡಿ ಮುಟ್ಟುಗೋಲು ಹಾಕುವ ಅಧಿಕಾರ ಇದೀಗ ಸರ್ಕಾರಕ್ಕೆ ದೊರಕಿದ್ದು, ಈ ಹೊಸ ಕಾಯ್ದೆ 125 ವರ್ಷಗಳಷ್ಟು ಹಳೆಯ ಅಂಚೆ ಕಚೇರಿ ಕಾಯ್ದೆಯನ್ನು ಬದಲಿಸಿದೆ.

ಈ ಮಸೂದೆಗೆ ರಾಜ್ಯಸಭೆಯಲ್ಲಿ ಡಿಸೆಂಬರ್ 4 ರಂದೇ ಅಂಗೀಕಾರ ದೊರೆತಿದ್ದು ಸಂಸತ್‌ನಲ್ಲಿ ಭದ್ರತಾ ಲೋಪದ ಬಗ್ಗೆ ಅಮಿತ್ ಶಾ ಉತ್ತರ ನೀಡಬೇಕು ಎಂದು ವಿಪಕ್ಷಗಳು ಗದ್ದಲ ನಡೆಸಿದ ಸಂದರ್ಭದಲ್ಲಿಯೇ ಈ ಮಸೂದೆಯನ್ನು ಅಂಗೀಕರಿಸಲಾಗಿದೆ.

No Comments

Leave A Comment