ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಉಡುಪಿ: ಕಾಂಗ್ರೆಸ್ ಹಿರಿಯ ಮುಖಂಡ ಅಗ್ನೇಷಿಯಸ್ ಡಿಸೋಜ ನಿಧನ

ಶಿರ್ವ, ಡಿ.20: ಕಾಂಗ್ರೆಸ್ ಹಿರಿಯ ಮುಖಂಡ ಅಗ್ನೇಷಿಯಸ್ ಡಿಸೋಜ (70) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ಡಿ.19ರಂದು ರಾತ್ರಿ ಮಟ್ಟಾರಿನ ಸ್ವಗೃಹದಲ್ಲಿ ನಿಧನರಾದರು.

ಪ್ರಸ್ತುತ ಉಡುಪಿ ಪ್ರಸ್ತುತ ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದ ಇವರು, ಎಂಟು ವರ್ಷಗಳ ಕಾಲ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ, ಉಡುಪಿ ತಾ.ಪಂ ಸದಸ್ಯ ಹಾಗೂ ಉಪಾಧ್ಯಕ್ಷರಾಗಿ, ಶಿರ್ವ ಗ್ರಾಪಂ ಅಧ್ಯಕ್ಷರಾಗಿ, ಶಿರ್ವ ಮಂಡಲ ಪ್ರಧಾನರಾಗಿ ಸೇವೆ ಸಲ್ಲಿಸಿದ್ದರು.

ಕೃಷಿಯಲ್ಲಿ ಬಿಎಸ್ಸಿ ಪದವಿ ಪಡೆದ ಇವರು, ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಹೊಸ ಪ್ರಯೋಗ ಮಾಡಿದ್ದರು.

ಪತ್ನಿಬೆಂಗಳೂರು ಚರ್ಚಿನ ಫಾ.ಸ್ಟಿವನ್ ಡಿಸೋಜ, ಉಡುಪಿ ನ್ಯಾಯವಾದಿ ಮೆಲ್ವಿನ್ ಡಿಸೋಜ ಸೇರಿದಂತೆ ಆರು ಮಂದಿ ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅಗ್ನೇಷಿಯಸ್ ಅವರ ನಿಧನಕ್ಕೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್ ಸಂತಾಪ ವ್ಯಕ್ತಪಡಿಸಿದ್ದಾರೆ.

No Comments

Leave A Comment