Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ವ್ಯಕ್ತಿ ಸ್ಥಳದಲ್ಲೇ ಮೃತ್ಯು!

ಬೆಂಗಳೂರು: ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಸಂತೋಷ್ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.ಮಾಗಡಿ ರಸ್ತೆ ನೈಸ್ ರೋಡ್ ಜಂಕ್ಷನ್ ಬಳಿ ಈ ಘಟನೆ ನಡೆದಿದ್ದು, ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ.

ಮೃತ ಸಂತೋಷ್ ಖಾಸಗಿ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

No Comments

Leave A Comment