Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ರಜೌರಿಯಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ: ಮತ್ತೋರ್ವ ಯೋಧ ಬಲಿ, ಹುತಾತ್ಮ ಸೈನಿಕರ ಸಂಖ್ಯೆ 4ಕ್ಕೆ ಏರಿಕೆ

ಪೂಂಚ್ (ಜಮ್ಮು): ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಗುರುವಾರ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮತ್ತೋರ್ವ ಯೋಧ ಹುತಾತ್ಮರಾಗಿದ್ದು. ಇದರೊಂದಿಗೆ ಹುತಾತ್ಮ ಯೋಧರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಗುರುವಾರ ಮಧ್ಯಾಹ್ನ 3.45ಕ್ಕೆ ರಜೌರಿಯ ಪೂಂಚ್ ನವ್ವಿ ಥಾನಮಂಡಿಯಲ್ಲಿ ಹೋಗುತ್ತಿದ್ದ ಎರಡು ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಹೊಂಚು ಹಾಕಿ ದಾಳಿ ನಡೆಸಿದ್ದರು. ಭಯೋತ್ಪಾದಕರ ಏಕಾಏಕಿ ದಾಳಿಗೆ ಯೋಧರು ತಕ್ಷಣವೇ ಪ್ರತ್ಯುತ್ತರ ನೀಡಿದರು. ಕೂಡಲೇ ಸ್ಥಳದಲ್ಲಿ  ಎನ್‌ಕೌಂಟರ್ ಆರಂಭವಾಗಿತ್ತು.

ಈ ವೇಳೆ ನಡೆದ ಚಕಮಕಿಯಲ್ಲಿ ಮೂವರು ಯೋಧರು ಪ್ರಾಣ ಕಳೆದುಕೊಂಡು, ಇಬ್ಬರು ಗಾಯಗೊಂಡಿದ್ದರು. ಇದೀಗ ಮತ್ತೋರ್ವ ಯೋಧ ಹುತಾತ್ಮರಾಗಿದ್ದಾರೆಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

ನವೆಂಬ್ 22 ರಂದು ಉಗ್ರರು ಹಾಗೂ ಸೈನಿಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಾಟಕ ಯೋಧ ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ದರು. ಇದಕ್ಕೂ ಮೊದಲು ಸೆಪ್ಟೆಂಬರ್ ನಲ್ಲಿ ನಡೆದ ದಾಳಿಗೆ ಇಬ್ಬರು ಯೋಧರು ಹುತಾತ್ಮರಾಗಿದ್ದರು. ಈ ವರ್ಷ ರಜೌರಿ, ಪೂಂಚ್ ಮತ್ತು ರೆಸಾಯ್ ಜಿಲ್ಲೆಗಳಲ್ಲಿ ಯೋಧರು ಮತ್ತು ಉಗ್ರರ ನಡುವಿನ ಮುಖಾಮುಖಿ, ಉಗ್ರರ ದಾಳಿಯಲ್ಲಿ 54 ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ 19 ಯೋಧರು. 28 ಮಂದಿ ಉಗ್ರರು ಹಾಗೂ 7 ನಾಗರೀಕರು ಸೇರಿದ್ದಾರೆ.

No Comments

Leave A Comment