Log In
BREAKING NEWS >
ಮಾರ್ಚ್ 8ರ೦ದು ಮಹಾಶಿವರಾತ್ರೆ-ಎಲ್ಲಾ ಈಶ್ವರ ದೇವಸ್ಥಾನಗಳಲ್ಲಿ ಭಜನಾ ಸ೦ಕೀರ್ತನೆ ಜರಗಲಿದೆ.....

ಉಡುಪಿ: ಸಮುದ್ರದ ಮಧ್ಯದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ, 8 ಮೀನುಗಾರರ ರಕ್ಷಣೆ

ಮಂಗಳೂರು: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಸಮುದ್ರದ ಮಧ್ಯದಲ್ಲಿ ಮೀನುಗಾರಿಕಾ ದೋಣಿಯೊಂದು ಮುಳುಗಿದ್ದು, ಅದರಲ್ಲಿದ್ದ ಎಂಟು ಮೀನುಗಾರರನ್ನು ಮತ್ತೊಂದು ದೋಣಿಯಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಡಿಸೆಂಬರ್ 12 ರಂದು ರಾತ್ರಿ ಮಲ್ಪೆ ಬಂದರಿನಿಂದ ಸಮುದ್ರಕ್ಕೆ ಇಳಿದಿದ್ದ ಬೋಟ್, ಡಿಸೆಂಬರ್ 19 ರ ನಸುಕಿನ ಜಾವ ದೋಣಿಯೊಳಗೆ ನೀರು ನುಗ್ಗಲು ಪ್ರಾರಂಭಿಸಿದ್ದು, ಹಂತಹಂತವಾಗಿ ಮುಳುಗಡೆಯಾಗಲು ಆರಂಭಿಸಿದೆ. ಇದನ್ನು ಗಮನಿಸಿದ ಹತ್ತಿರದಲ್ಲೇ ಇದ್ದ ಮೂಕಾಂಬಿಕಾ ಅನುಗ್ರಹ ಹೆಸರಿನ ಮೀನುಗಾರಿಕಾ ಬೋಟ್ ನಲ್ಲಿದ್ದವರು, ಮುಳುಗುತ್ತಿದ್ದ ಬೋಟ್ ನಲ್ಲಿದ್ದವರ ರಕ್ಷಣೆ ಧಾವಿಸಿ ಕಾಪಾಡಿದ್ದಾರೆ.

No Comments

Leave A Comment