ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ದತ್ತ ಜಯಂತಿ ಶೋಭಾ ಯಾತ್ರೆ: ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿದ ಶೋಭಾ ಕರಂದ್ಲಾಜೆ, ಸಿಟಿ ರವಿ! ವಿಡಿಯೋ
ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಅದ್ಧೂರಿಯಾಗಿ ದತ್ತ ಜಯಂತಿ ಆಚರಣೆ ಮಾಡಲಾಗುತ್ತಿದೆ. ತಾಲೂಕಿನ ಆಲ್ದೂರಿನಲ್ಲಿ ಶನಿವಾರ ನಡೆದ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಚಿವ ಸಿ.ಟಿ. ರವಿ ಕಾರ್ಯಕರ್ತರೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ.
ಕೈಯಲ್ಲಿ ಭಗವಾ ಧ್ವಜ ಹಿಡಿದು ಸಾವಿರಾರರು ಕಾರ್ಯಕರ್ತರು, ದತ್ತ ಮಾಲಾಧಾರಿಗಳೊಂದಿಗೆ ಡಿಜೆ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ರಸ್ತೆಯುದ್ಧಕ್ಕೂ ಜೈ ಶ್ರೀರಾಮ್ ಹಾಗೂ ದತ್ತಾತ್ರೇಯ ಎಂಬ ಘೋಷಣೆ ಮೊಳಗಿದವು. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.
ಇಂದು ಚಿಕ್ಕಮಗಳೂರು ನಗರದ ಪ್ರಮುಖ ಬೀದಿಗಳಲ್ಲಿ ಮಹಿಳೆಯರಿಂದ ಅನಸೂಯ ಜಯಂತಿ ಆಚರಣೆ ಮಾಡುವುದರ ಮೂಲಕ ಸಂಕೀರ್ತನೆ ಯಾತ್ರೆ ನಡೆಯಲಿದೆ. ನಾಳೆ ನಗರದಲ್ಲಿ ಬೃಹತ್ ಶೋಭಾಯತ್ರೆ ನಡೆಯಲಿದೆ. ಈ ಶೋಭಾಯಾತ್ರೆಯಲ್ಲಿ 25,000 ಕ್ಕೂ ಅಧಿಕ ಜನ ಮಾಲಾಧಾರಿಗಳು ಭಾಗವಹಿಸುವ ಸಾಧ್ಯತೆ ಇದೆ.