ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಮತ್ತೆ ಏರಿಕೆಯ ಹಾದಿಯತ್ತ ಕೊರೋನಾ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 656 ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 3,742
ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 656 ಹೊಸ ಕೋವಿಡ್ 19 ಪ್ರಕರಣಗಳು ಮತ್ತು ಒಂದು ಸಾವು ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,742ಕ್ಕೆ ತಲುಪಿದ್ದು, ಕೇರಳದಲ್ಲಿ 128 ಪ್ರಕರಣಗಳು ವರದಿಯಾಗಿದೆ. ಇನ್ನು ಕರ್ನಾಟಕದಲ್ಲಿ 96 ಪ್ರಕರಣಗಳು ಪತ್ತೆಯಾಗಿದ್ದಾರೆ, ಮಹಾರಾಷ್ಟ್ರದಲ್ಲಿ 35 ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ ದೆಹಲಿಯಲ್ಲಿ 16 ಹೊಸ ಪ್ರಕರಣಗಳು ದಾಖಲಾಗಿವೆ.
ದೇಶದಲ್ಲಿನ ಕೋವಿಡ್ ಅಂಕಿ ಅಂಶಗಳ ಪ್ರಕಾರ ಈವರೆಗೂ 4.50 ಕೋಟಿ ಮಂದಿಗೆ ಸೋಂಕು ತಗುಲಿದ್ದು, ಅದರಲ್ಲಿ 4.44 ಕೋಟಿ ಮಂದಿ ಗುಣಮುಖರಾಗಿದ್ದಾರೆ. 5.33 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ, ಗುಣಮುಖರ ಪ್ರಮಾಣವು ಸೇ.98.81ರಷ್ಟು ಹಾಗೂ ಮರಣ ದರವು ಶೇ.1.19ರಷ್ಟು ದಾಖಲಾಗಿದೆ.