ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಮಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿಗೆ ಬೆಂಕಿ, ಲಕ್ಷಾಂತರ ರೂ. ನಷ್ಟ
ಮಂಗಳೂರು: ಡಿ, 25.ಮಣ್ಣಗುಡ್ಡದಲ್ಲಿ ಸೋಮವಾರ ಮುಂಜಾನೆ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಉಂಟಾಗಿ ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.
ಮುಂಜಾನೆ 5.30ರ ಸುಮಾರಿಗೆ ಘಟನೆ ನಡೆದಿದ್ದು, ಮಣ್ಣಗುಡ್ಡದ ಮಠದ ಕಣಿ ಮಿಶನ್ ಗೋರಿ ರಸ್ತೆಯಲ್ಲಿರುವ ಸಂದೀಪ್ ಎಂಬವರಿಗೆ ಸೇರಿದ ದಿನಸಿ ಅಂಗಡಿಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ.
ಬೆಂಕಿಯ ಕೆನ್ನಾಲಿಗೆಗೆ ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿದ್ದು, ಸುಮಾರು ಎರಡು ಲಕ್ಷ ರೂ ನಷ್ಟವಾಗಿದೆ ಎಂದು ಪ್ರಾಥಮಿಕ ಅಂದಾಜಿಸಲಾಗಿದೆ.
ಅಗ್ನಿಶಾಮಕ ದಳದವರು ಸಕಾಲದಲ್ಲಿ ಬಂದು ಬೆಂಕಿ ನಂದಿಸಿದ ಕಾರಣ ಹೆಚ್ಚಿನ ಅನಾಹುತ ಹಾಗೂ ಇತರ ಅಂಗಡಿಗೆ ಬೆಂಕಿ ಹರಡುವುದು ತಪ್ಪಿದೆ.