Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ, ವಿಧಾನಸಭೆ ವಿರೋಧ ಪಕ್ಷದ ಉಪನಾಯಕನಾಗಿ ಅರವಿಂದ್ ಬೆಲ್ಲದ್‌ ನೇಮಕ!

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ರಾಜ್ಯ ಘಟಕದಲ್ಲಿ ಎರಡನೇ ಹಂತದ ಅಧಿಕಾರ ಹಂಚಿಕೆ ಮಾಡಿದ್ದು, ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಪ್ರಮುಖ ಹುದ್ದೆಗಳಿಗೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಮೇಲ್ಮನೆ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ್ ಪೂಜಾರಿ  ಅವರನ್ನು ನೇಮಿಸಲಾಗಿದೆ. ಇದೇ ವೇಳೆ ಅವರನ್ನು ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕನಾಗಿ ಅರವಿಂದ್‌ ಬೆಲ್ಲದ್‌  ಅವರನ್ನು ನೇಮಕ ಮಾಡಲಾಗಿದೆ.

ಕೆಲವು ದಿನಗಳ ಹಿಂದಷ್ಟೇ ಬಿ.ವೈ ವಿಜಯೇಂದ್ರ ಅವರು ರಾಜ್ಯ ಬಿಜೆಪಿ ಉಪಾಧ್ಯಕ್ಷರು, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಕಾರ್ಯದರ್ಶಿಗಳು ಮತ್ತು ಕೆಲವು ಮೋರ್ಚಾಗಳಿಗೆ ನೇಮಕಾತಿಯನ್ನು ಪ್ರಕಟಿಸಿದ್ದರು. ಇದೀಗ ಎರಡನೇ ಹಂತದಲ್ಲಿ ವಿಧಾನ ಸಭೆ ಮತ್ತು ಪರಿಷತ್‌ನ ಪ್ರಮುಖ ಹುದ್ದೆಗಳಿಗೆ ನೇಮಕ ಮಾಡಲಾಗಿದೆ.

ಕೋಟ ಶ್ರೀನಿವಾಸ ಪೂಜಾರಿ: ಮೇಲ್ಮನೆ ವಿಪಕ್ಷ ನಾಯಕ, ಸುನೀಲ್ ವಲ್ಯಾಪುರೆ : ಪರಿಷತ್ ಉಪ ನಾಯಕ, ಅರವಿಂದ್ ಬೆಲ್ಲದ್: ವಿಧಾನಸಭೆಯಲ್ಲಿ ವಿರೋಧ ಪಕ್ಷದ ಉಪ ನಾಯಕ, ಎನ್‌. ರವಿಕುಮಾರ್ ಕುಮಾರ್ : ವಿಧಾನ ಪರಿಷತ್ ಮುಖ್ಯ ಸಚೇತಕ
ದೊಡ್ಡನಗೌಡ ಪಾಟೀಲ್: ವಿಧಾನಸಭೆ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ.

ಆರ್‌. ಅಶೋಕ್‌ ಅವರನ್ನು ವಿಧಾನಭೆಯ ವಿಪಕ್ಷ ನಾಯಕರಾಗಿ ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್‌ ವಿಪಕ್ಷ ನಾಯಕನ ಸ್ಥಾನವನ್ನು ಉತ್ತರ ಕರ್ನಾಟಕಕ್ಕೆ ಕೊಡಬೇಕು ಎಂಬ ಬೇಡಿಕೆ ಇತ್ತು. ಆದರೆ, ಕಳೆದ ಬಾರಿ ವಿಧಾನ ಪರಿಷತ್‌ ವಿಪಕ್ಷ ಸ್ಥಾನವನ್ನು ಚೆನ್ನಾಗಿ ನಿಭಾಯಿಸಿದ ಕೋಟ ಶ್ರೀನಿವಾಸ ಪೂಜಾರಿ ಅವರಿಗೇ ಪಕ್ಷ ಮಣೆ ಹಾಕಿದೆ. ಉತ್ತರ ಕರ್ನಾಟಕ ಭಾಗದಿಂದ ವಿಪಕ್ಷ ಸ್ಥಾನಕ್ಕೆ ಕೇಳಿ ಬಂದಿದ್ದ ರಘುನಾಥ್ ಮಲ್ಕಾಪುರೆ ಅವರಿಗೆ ಉಪ ನಾಯಕನ ಸ್ಥಾನ ನೀಡಲಾಗಿದೆ.

No Comments

Leave A Comment