ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಹಾವೇರಿ: ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; 45 ವಿದ್ಯಾರ್ಥಿಗಳಿಗೆ ಗಾಯ, ನಾಲ್ವರು ಗಂಭೀರ

ರಾಯಚೂರು: ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಬೇವಿನಹಳ್ಳಿ ಕ್ರಾಸ್‌ ಬಳಿ ಮಂಗಳವಾರ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿಯಾಗಿ ಶೈಕ್ಷಣಿಕ ಪ್ರವಾಸಕ್ಕೆ ಹೊರಟಿದ್ದ 45 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಚಾಲಕ ಸೇರಿ ನಾಲ್ವರ ಪರಿಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಎಲ್ಲ ವಿದ್ಯಾರ್ಥಿಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಿಂಗಸೂರು ತಾಲ್ಲೂಕಿನ ಸಜ್ಜಲಗುಡ್ಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 53 ವಿದ್ಯಾರ್ಥಿಗಳು ಮತ್ತು 6 ಮಂದಿ ಶಿಕ್ಷಕರು ಸರ್ಕಾರಿ ಬಸ್‌ ಬುಕ್‌ ಮಾಡಿಕೊಂಡು ಶಿಗ್ಗಾಂವಿ ತಾಲೂಕಿನ ಗೊಟಗೋಡಿಯ ರಾಕ್ ಗಾರ್ಡನ್ ವೀಕ್ಷಿಸಲು ತೆರಳುತ್ತಿದ್ದರು.

ಬೇವಿನಹಳ್ಳಿ ಕ್ರಾಸ್ ಬಳಿ ಎದುರಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದಾಗ ನಿಯಂತ್ರಣ ತಪ್ಪಿ ಬಸ್‌ ಪಲ್ಟಿಯಾಗಿದೆ.

ಬೆನ್ನು ಮೂಳೆ ಮುರಿತಕ್ಕೊಳಗಾದ ಡ್ರೈವರ್ ಮಲಪ್ಪ ಹೊಸೂರು ಮತ್ತು ಗಂಭೀರ ಗಾಯಗೊಂಡ ವಿದ್ಯಾರ್ಥಿಗಳಾದ ವಿವ್ಯಾ ಸಜ್ಜಲಗುಡ್ಡ, ಸವಿತಾ ರವಿ ರೆಡ್ಡಿ, ಗುರು ಗೌಡ ಎಂಬವರನ್ನು ಹುಬ್ಬಳ್ಳಿ ಕಿಮ್ಸ್ ಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಸಣ್ಣ ಪುಟ್ಟ ಗಾಯಗಳಾದ ವಿದ್ಯಾರ್ಥಿಗಳನ್ನು ಸವಣೂರು ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

No Comments

Leave A Comment