ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​

ನೆಲಮಂಗಲ: ಚಲಿಸುವಾಗಲೇ ನಡುರಸ್ತೆಯಲ್ಲೇ ಧಗಧಗನೇ ಹೊತ್ತಿ ಉರಿದ ಕಾರು – ಓರ್ವ ಸಜೀವ ದಹನ

ಬೆಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮಾರುತಿ ಎರ್ಟಿಗಾ CNG ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾಗಿರುವ ಘಟನೆ ಡಿ. 26 ರಂದು ಮಂಗಳವಾರ ನೆಲಮಂಗಲದ ಅಂಚೇಪಾಳ್ಯದ ಬಳಿ ನಡೆದಿದೆ.

ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಓರ್ವ ವ್ಯಕ್ತಿ ಹೊರಗಡೆ ಬರಲು ಸಾಧ್ಯವಾಗದೇ ಕೂತಲ್ಲೇ ಸಜೀವ ದಹನವಾಗಿದ್ದಾರೆ. ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಧಗಧಗನೇ ಹೊತ್ತಿ ಉರಿದು ಭಸ್ಮವಾಗಿದೆ.

ಘಟನೆಯಿಂದಾಗಿ ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ದೌಡಾಯಿಸಿ ಪರಿಶಿಲನೆ ನಡೆಸುತ್ತಿದ್ದಾರೆ.

ಹೈಬ್ರಿಡ್/ಪೆಟ್ರೋಲ್ ಎಕ್ಸ್ಎಲ್ 6 ಕಾರು ಅನಿಲ್ ಕುಮಾರ್ ಟಿ ಅವರಿಗೆ ಸೇರಿದ್ದು, ಬೆಂಗಳೂರು ಉತ್ತರ ಆರ್‌ಟಿಒ ಕಚೇರಿಯಲ್ಲಿ ನೋಂದಣಿಯಾಗಿದೆ.

No Comments

Leave A Comment