ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...
ಕೋವಿಡ್ ಬಂದರೆ 7 ದಿನ ಹೋಂ ಐಸೊಲೇಷನ್ ಕಡ್ಡಾಯ, ಹೊಸ ವರ್ಷ ಆಚರಣೆಗೆ ಯಾವುದೇ ನಿರ್ಬಂಧವಿಲ್ಲ!
ಬೆಂಗಳೂರು: ಕೊರೋನಾ ಬಂದರೆ ರೋಗಿಗಳು 7 ದಿನ ಕಡ್ಡಾಯವಾಗಿ ಹೋಂ ಐಸೊಲೇಷನ್ ನಲ್ಲಿರಬೇಕು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಹಾಗೆಂದು ಜನರು ಆತಂಕಪಡುವ ಅಗತ್ಯವಿಲ್ಲ, ಕಾಳಜಿ ವಹಿಸಿಕೊಳ್ಳಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇಂದು ಬೆಂಗಳೂರಿನಲ್ಲಿ ಕೋವಿಡ್ ಸಂಪುಟ ಉಪಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕೋವಿಡ್ ಮಾರ್ಗಸೂಚಿಗಳ ಬಗ್ಗೆ ಮಾಹಿತಿ ನೀಡಿದರು. ಕೋವಿಡ್ ಸಂಪುಟ ಉಪಸಮಿತಿ ಸಭೆಯಲ್ಲಿ ತಜ್ಞರೊಂದಿಗೆ ಚರ್ಚೆ ನಡೆಸಿದ ನಂತರ ತಂದಿರುವ ಮಾರ್ಗಸೂಚಿಗಳೇನು ಎಂದು ವಿವರಿಸಿದರು.
ಹೊಸ ವರ್ಷಕ್ಕೆ ಇಲ್ಲ ನಿರ್ಬಂಧ: ಹೊಸ ವರ್ಷ ಆಚರಣೆಗೆ ಯಾವುದೇ ನಿರ್ಬಂಧವಿಲ್ಲ. ಜನರೇ ಜನದಟ್ಟಣಿಯಲ್ಲಿ ಸೇರದಂತೆ ತಮ್ಮನ್ನು ತಾವು ಸಾಧ್ಯವಾದಷ್ಟು ನಿರ್ಬಂಧ ಹೇರಿಕೊಳ್ಳಿ. ಜ್ವರ, ಕೆಮ್ಮು, ನೆಗಡಿ, ಶೀತ, ಗಂಟಲು ನೋವು ಬಂದರೆ ಮನೆಯಲ್ಲಿಯೇ ಉಳಿದುಕೊಳ್ಳಿ. ಇದು ಖಾಸಗಿ ವಲಯಕ್ಕೂ ನಿಯಮ ಅನ್ವಯವಾಗುತ್ತದೆ, ಕಡ್ಡಾಯವಾಗಿ ಉದ್ಯೋಗಿಗಳಿಗೆ ಕೋವಿಡ್ ರಜೆ ನೀಡಬೇಕು ಎಂದರು.
ಶಾಲೆಗೆ ಕಳುಹಿಸಬೇಡಿ: ಕೋವಿಡ್ ಲಕ್ಷಣಗಳು, ಜ್ವರ, ಕೆಮ್ಮು ಮಕ್ಕಳಲ್ಲಿ ಕಂಡುಬಂದರೆ ಶಾಲೆಗೆ ಕಳುಹಿಸದೇ ಇರುವುದು ಉತ್ತಮ, ಮಕ್ಕಳಲ್ಲಿ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ನಿರ್ಬಂಧ ಹಾಕುವುದು ಉತ್ತಮ. ಹೊರಗೆ ಓಡಾಡುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಳ್ಳಿ. ಶುಚಿತ್ವ ಕಾಪಾಡಿ, ಸ್ಯಾನಿಟೈಸರ್ ಬಳಸಿ ಎಂದರು.
ಜೆಎನ್.1 ಉಪತಳಿ ಹೆಚ್ಚಾಗುವ ಸಾಧ್ಯತೆ: ರಾಜ್ಯದಲ್ಲಿ ಜೆಎನ್.1 ಉಪತಳಿ ಹೆಚ್ಚಾಗುವ ಸಾಧ್ಯತೆಗಳಿವೆ. ನಿನ್ನೆಯ 60 ಸ್ಯಾಂಪಲ್ಸ್ ನಲ್ಲಿ 34 JN.1 ಪ್ರಕರಣಗಳು ಪತ್ತೆಯಾಗಿವೆ. ಟೆಸ್ಟ್ ಹೆಚ್ಚಿಗೆ ಮಾಡಿದಷ್ಟು ಸ್ಪ್ರೆಡಿಂಗ್ ಗೊತ್ತಾಗುತ್ತೆ. ಹೀಗಾಗಿ ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ಹಿಂದೆ ಆದ ತಪ್ಪು ಆಗಬಾರದು ಎಂದು ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ. ಇದು ಆಶ್ಚರ್ಯ ಪಡುವ ವಿಚಾರ ಅಲ್ಲ. ಇದು ಎಕ್ಸ್ಪೆಕ್ಟ್ ಮಾಡಲಾಗಿತ್ತು. Variant of interest ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ರಿಸ್ಕ್ ಫ್ಯಾಕ್ಟರಿ ಅಡೈಸರಿ ಬಂದಿಲ್ಲ. ಇದು ಸಮಾಧಾನಕರ ವಿಚಾರ. ಆದರೂ ಎಚ್ಚರಿಕೆ ಅಗತ್ಯ ಎಂದು ಹೇಳಿದರು.
ಸಿಎಂ ಎಚ್ಚರಿಕೆಯಿಂದ ಇರಿ ಎಂದು ಸಲಹೆ ನೀಡಿದ್ದಾರೆ. ಐಸಿಯು ಪರಿಶೀಲನೆ ನಡೆಸಲಿದ್ದೇವೆ. ಆಕ್ಸಿಜನ್ ಸಪ್ಲೈ , ಎಲ್ ಎಂಒ ರಾಜ್ಯದಲ್ಲಿ ಸಜ್ಜುಗೊಳಿಸಲು ತಿಳಿಸಲಾಗಿದೆ. ಆಕ್ಸಿಜನ್ ಕೊರತೆಯಾಗದಂತೆ ಎಚ್ಚರವಹಿಸಲು ಸೂಚಿಸಲಾಗಿದೆ. 436 ಪಾಸಿಟಿವ್ ಪ್ರಕರಣಗಳ ಪೈಕಿ 400 ಜನ ಹೋಂ ಐಸೋಲೇಷನ್ ನಲ್ಲಿದ್ದಾರೆ. 7 ಜನ ಐಸಿಯುನಲ್ಲಿದ್ದಾರೆ. ಖುದ್ದು ನಮ್ಮ ಆರೋಗ್ಯ ಇಲಾಖೆ ಅಧಿಕಾರಿಗಳು ಟ್ರ್ಯಾಕಿಂಗ್ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
4 ಆಕ್ಸಿಜನ್ ಕಂಟೈನರ್ ಖರೀದಿ ಮಾಡಲಿದ್ದೇವೆ. ಆಸ್ಪತ್ರೆ ಮತ್ತು ಮನೆಯಲ್ಲಿ ಇರುವವರಿಗೆ ಈ ಆಕ್ಸಿಜನ್ ಕಂಟೈನರ್ ಉಪಯೋಗವಾಗಲಿದೆ. ಮೊದಲ ಹಾಗೂ ಎರಡನೇ ಡೋಸ್ ಪಡೆದಿದ್ದಾರೆ. ಅವರಿಗೆಲ್ಲ ಮುನ್ನೆಚ್ಚರಿಕೆಗಾಗಿ ಲಸಿಕೆ ನೀಡಲಾಗುತ್ತದೆ. ಕೇಂದ್ರ ಸರ್ಕಾರದಿಂದ 30 ಸಾವಿರ ಮುನ್ನೆಚ್ಚರಿಕೆ ವ್ಯಾಕ್ಸಿನ್ ಕೇಳಿದ್ದು, ಉಪ ಸಮಿತಿಯಲ್ಲಿ ಖರೀದಿಗೆ ನಿರ್ಧಾರ ಮಾಡಲಾಗಿದೆ ಎಂದರು.
ಕೋ ಮಾರ್ಬಿಟ್, ಹೆಲ್ತ್ ವರ್ಕಸ್ ಸೇರಿ ಹಲವರಿಗೆ ಮುನ್ನೆಚ್ಚರಿಕೆ ವ್ಯಾಕ್ಸಿನ್ ಕೊಡಲಾಗುತ್ತದೆ. ಸುವೆಜ್ ಸರ್ವಲೆನ್ಸ್ ಮೂಲಕ ಕೂಡಾ ಕೊವಿಡ್ ಟ್ಯ್ರಾಕ್ ಮಾಡಲಾಗುತ್ತದೆ. ಆರೋಗ್ಯ ಸಿಬ್ಬಂದಿಗೆ ಪ್ಲೂ ವ್ಯಾಕ್ಸಿನ್ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ 30 ಸಾವಿರ ಕೋರ್ಬಿ ವ್ಯಾಕ್ಸ್ ಖರೀದಿಸಲಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿವರಿಸಿದರು.