Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಶಾಂತಿಯುತ ಹೊಸ ವರ್ಷಾಚರಣೆಗೆ ರಾಜ್ಯದಾದ್ಯಂತ ಮುಂಜಾಗ್ರತಾ ಕ್ರಮ: ಗೃಹ ಸಚಿವ ಜಿ ಪರಮೇಶ್ವರ

ಬೆಂಗಳೂರು: ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಹೊಸ ವರ್ಷ ಮತ್ತು ಸಂಬಂಧಿತ ಆಚರಣೆಗಳ ಸಂದರ್ಭದಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಮಂಗಳವಾರ ಹೇಳಿದರು.

ರಾಜ್ಯ ರಾಜಧಾನಿ ಬೆಂಗಳೂರು ಮಾತ್ರವಲ್ಲದೆ ಮೈಸೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿಯಂತಹ ಎರಡನೇ ಶ್ರೇಣಿಯ ನಗರಗಳಲ್ಲಿಯೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ರಾಜ್ಯಾದ್ಯಂತ ಈ ಬಗ್ಗೆ ಪೊಲೀಸರು ಸಲಹೆಗಳನ್ನು ನೀಡಲಿದ್ದಾರೆ ಎಂದು ಅವರು ಹೇಳಿದರು.

‘ಹೊಸ ವರ್ಷಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ, ಈಗಾಗಲೇ ಪೊಲೀಸ್, ಆರೋಗ್ಯ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ವಿದ್ಯುತ್ ಮತ್ತು ಅಬಕಾರಿ ಇಲಾಖೆಗಳಂತಹ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಆಯಾ ಇಲಾಖೆಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದ್ದೇನೆ’ ಎಂದು ಪರಮೇಶ್ವರ ಹೇಳಿದರು.

‘ಬೆಂಗಳೂರಿನ ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಂತಹ ಸ್ಥಳಗಳಲ್ಲಿ ವಿಶೇಷವಾಗಿ ಜನರು ಸಂಭ್ರಮಾಚರಣೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸ್ಥಳಗಳಲ್ಲಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕುಟ ಎಂದರು.

ಈ ಕುರಿತು ನಾವು ಸಲಹೆ ನೀಡಿದ್ದು, ನಗರ ಪೊಲೀಸ್ ಆಯುಕ್ತರು ಅದನ್ನು ಹಂಚಿಕೊಳ್ಳಲಿದ್ದಾರೆ ಎಂದು ಅವರು ಹೇಳಿದರು.

No Comments

Leave A Comment