Log In
BREAKING NEWS >
ಮಾರ್ಚ್ 8ರ೦ದು ಮಹಾಶಿವರಾತ್ರೆ-ಎಲ್ಲಾ ಈಶ್ವರ ದೇವಸ್ಥಾನಗಳಲ್ಲಿ ಭಜನಾ ಸ೦ಕೀರ್ತನೆ ಜರಗಲಿದೆ.....

COVID-19: ಕಳೆದ 24 ಗಂಟೆಗಳಲ್ಲಿ 702 ಮಂದಿಗೆ ಕೋವಿಡ್ ಪಾಸಿಟಿವ್, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 702 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,097ಕ್ಕೆ ಏರಿಕೆಯಾಗಿದೆ ಎಂದು  ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಅಧಿಕೃತ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಆರು ಮಂದಿ ಕೊರೊನಾವೈರಸ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಪೈಕಿ ಮಹಾರಾಷ್ಟ್ರದಲ್ಲಿ ಇಬ್ಬರು ಮತ್ತು ದೆಹಲಿ, ಕರ್ನಾಟಕ, ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ.

2020ರ ಆರಂಭದಲ್ಲಿ ಸಾಂಕ್ರಾಮಿಕ ರೋಗ ಕಾಣಿಸಿಕೊಂಡಿತು. ಕಳೆದ ನಾಲ್ಕು ವರ್ಷಗಳಲ್ಲಿ ದೇಶದಾದ್ಯಂತ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 4,50,10,944 ಕ್ಕೆ ಏರಿಕೆಯಾಗಿದ್ದು, ಈವರೆಗೆ ಮೃತಪಟ್ಟವರ ಸಂಖ್ಯೆ 5,33,346 ಕ್ಕೆ ಏರಿದೆ.

ಸಚಿವಾಲಯದ ವೆಬ್‌ಸೈಟ್ ಪ್ರಕಾರ, ಸೋಂಕಿನಿಂದ ಚೇತರಿಸಿಕೊಂಡ ಜನರ ಸಂಖ್ಯೆ 4.4 ಕೋಟಿಗೂ ಹೆಚ್ಚಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.81 ರಷ್ಟಿದೆ.

ದೇಶದಲ್ಲಿ ಇದುವರೆಗೆ 220.67 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ನೀಡಲಾಗಿದೆ.

No Comments

Leave A Comment