ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ತಮಿಳುನಾಡಿನಲ್ಲಿ ಭೀಕರ ಅಪಘಾತ; ನಿಯಂತ್ರಣ ತಪ್ಪಿ ಟೀ ಅಂಗಡಿಗೆ ನುಗ್ಗಿದ ಲಾರಿ, 5 ಮಂದಿ ದುರ್ಮರಣ
ತಿರುಚಿ (ತಮಿಳುನಾಡು): ತಮಿಳುನಾಡಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದಲ್ಲಿದ್ದ ಟೀ ಅಂಗಡಿಗೆ ನುಗ್ಗಿದ ಪರಿಣಾಮ ಮಹಿಳೆ ಸೇರಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಿರುಚಿಯಲ್ಲಿ ಶನಿವಾರ ನಡೆದಿದೆ.
ಘಟನೆಯಲ್ಲಿ 19 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಪುದುಕೊಟ್ಟೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಿರುಚಿ-ರಾಮೇಶ್ವರಂ ಹೆದ್ದಾರಿಯಲ್ಲಿ ನಿಯಂತ್ರಣ ಕಳೆದುಕೊಂಡ ಲಾರಿ ಏಕಾಏಕಿ ಟೀ ಅಂಗಡಿಗೆ ನುಗ್ಗಿದೆ ಎಂದು ವರದಿಯಾಗಿದೆ.
ಅಪಘಾತದಲ್ಲಿ ಲಾರಿಯ ಮುಂಭಾಗ ಸಂಪೂರ್ಣವಾಗಿ ನಜ್ಜು-ಗುಜ್ಜಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.