
ಹೆಚ್ಚುತ್ತಿರುವ ಕೋವಿಡ್ JN1 ರೂಪಾಂತರಿ ಸೋಂಕು: ರಾಜ್ಯದಲ್ಲಿ ಜ.2 ರಿಂದ ಮತ್ತೆ ಲಸಿಕೆ ಅಭಿಯಾನ ಆರಂಭ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು ಹೆಚ್ಚಳವಾಗುತ್ತಿದ್ದು, ಕೊರೋನಾ ಆತಂಕದ ಹಿನ್ನೆಲೆಯಲ್ಲಿ ಮತ್ತೆ ರಾಜ್ಯದಲ್ಲಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ.
ಜ.02 ರಿಂದ ರಾಜ್ಯದಲ್ಲಿ ಕೋರ್ಬಿವ್ಯಾಕ್ಸ್ ಲಸಿಕೆಯನ್ನು ನೀಡಲು ಸರ್ಕಾರ ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ವ್ಯಾಕ್ಸಿನ್ ನೀಡಲು ಸರ್ಕಾರ ಮುಂದಾಗಿದೆ.