``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಉಡುಪಿ ನಗರಸಭೆಯ ಉಪಚುನಾವಣೆ : 6ಮತಗಳ ಅ೦ತರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಅನಿಟಾ ಬೆಲಿಂಡ ಡಿಸೋಜ ಜಯ

ಉಡುಪಿ: ಉಡುಪಿ ನಗರಸಭೆಯ ಮೂಡು ಪೆರಂಪಳ್ಳಿ ವಾರ್ಡಿನಲ್ಲಿ ನಡದೆ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಅನಿಟಾ ಬೆಲಿಂಡ ಡಿಸೋಜ ಜಯಭೇರಿ ಸಾಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಪಕ್ಷದ ಸದಸ್ಯೆ ಸೆಲಿನಾ ಕರ್ಕಡಾ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯಿತು.ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಶ್ರುತಿ ಅವರ ವಿರುದ್ಧ ಬಿಜೆಪಿ ಪಕ್ಷದ ಅಭ್ಯರ್ಥಿ ಅನಿತಾ ಬೆಲಿಂಡಾ ಡಿಸೋಜ ಆರು ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.

ಕಳೆದ ಹತ್ತು ವರ್ಷಗಳಿಂದ ಕಾಂಗ್ರೆಸ್ ತೆಕ್ಕೆಯಲ್ಲಿದ್ದ ಮೂಡು ಪೆರಂಪಳ್ಳಿ ವಾರ್ಡ್ ಈಗ ಬಿಜೆಪಿ ಪಾಲಾಗಿದೆ.ಉಡುಪಿ ನಗರಸಭೆಯಲ್ಲಿ 35 ಸ್ಥಾನಗಳಿವೆ.ಆದರೆ ಈ ಸೋಲಿನಿಂದ ಕಾಂಗ್ರೆಸ್ ಪಕ್ಷದ ಸದಸ್ಯರ ಸಂಖ್ಯೆ ನಾಲ್ಕರಿಂದ ಮೂರಕ್ಕೆ ಇಳಿದಿದೆ ಎಂದು ತಿಳಿದು ಬಂದಿದೆ.

No Comments

Leave A Comment