ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಮುಂಬೈನಲ್ಲಿ ಗ್ಲೌಸ್ ಕಾರ್ಖಾನೆಯೊಂದರಲ್ಲಿ ಭಾರೀ ಅಗ್ನಿ ಅವಘಡ: 6 ಮಂದಿ ಸಜೀವ ದಹನ

ಮುಂಬೈ: ಮಹಾರಾಷ್ಟ್ರದ ಗ್ಲೌಸ್ ಕಾರ್ಖಾನೆಯೊಂದರಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ ಸಂಭವಿಸಿರುವ ಭಾರೀ ಅಗ್ನಿ ಅವಘಡದಲ್ಲಿ ಆರು ಸಜೀವ ದಹನವಾಗಿರುವ ಘಟನೆ ನಡೆದಿದೆ.

ಇಂದು ಬೆಳಗಿನ 2 ಗಂಟೆಯ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಕಾರ್ಖಾನೆಯ ಒಳಗೆ ಸಿಲುಕಿದ್ದ 6 ಜನ ಸಾವಿಗೀಡಾಗಿದ್ದಾರೆ.

ಕೂಡಲೇ ಆವರಣದೊಳಗೆ ಮಲಗಿದ್ದ ಕಾರ್ಮಿಕರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಈ ವೇಳೆಗೆ ಇಡೀ ಕಾರ್ಖಾನೆಗೆ ಬೆಂಕಿ ಹೊತ್ತಿಕೊಂಡಿರುವುದು ಕಂಡು ಬಂದಿದೆ.

ಬಳಿಕ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ 6 ಜನರ ಮೃತದೇಹಗಳನ್ನ ಹೊರತೆಗೆದಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿ ಮೋಹನ್ ಮುಂಗ್ಸೆ ತಿಳಿಸಿದ್ದಾರೆ.

ಬೆಳಗಿನ ವೇಳೆಗೆ ಬೆಂಕಿ ಹತೋಟಿಗೆ ಬಂದಿದ್ದು, ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

kiniudupi@rediffmail.com

No Comments

Leave A Comment