ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್: ಸೋಂಕಿತರ ಚಿಕಿತ್ಸೆಗೆ ಹಾಸಿಗೆ ಕಾಯ್ದಿರಿಸುವಂತೆ ಜಿಲ್ಲಾಸ್ಪತ್ರೆ, ವೈದ್ಯಕೀಯ ಕಾಲೇಜುಗಳಿಗೆ ಸರ್ಕಾರ ಸೂಚನ
ಬೆಂಗಳೂರು: ದಿನ ಕಳೆಯುತ್ತಿದ್ದಂತೆ ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳು ಸೇರಿದಂತೆ ವೈದ್ಯಕೀಯ ಕಾಲೇಜುಗಳಲ್ಲಿ ಕನಿಷ್ಟ 10 ಸಾಮಾನ್ಯ ಹಾಸಿಗೆಗಳು ಮತ್ತು 5 ಐಸಿಯು ಹಾಸಿಗೆಗಳನ್ನು ಪ್ರತ್ಯೇಕವಾಗಿ ಕೋವಿಡ್-19 ಸೋಂಕಿತರಿಗಾಗಿ ಕಾಯ್ದಿರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಈ ಸಂಬಂಧ ಆರೋಗ್ಯ ಇಲಾಖೆ ಪ್ರಧಾನ ಕರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಸುತ್ತೋಲೆ ಹೊರಡಿಸಿದ್ದು, ಸೋಂಕು ಲಕ್ಷಣ ಹೊಂದಿರುವವರು ಆಸ್ಪತ್ರೆಗೆ ಬಂದಾಗ ದಾಖಲಿಸಿಕೊಂಡು ಚಿಕಿತ್ಸೆ ನೀಡುವ ಅಗತ್ಯವಿದೆ. ಹಾಗಾಗಿ ಕೋವಿಡ್ ಚಿಕಿತ್ಸೆಗಾಗಿ ಪ್ರತ್ಯೇಕ ಹಾಸಿಗೆಗಳನ್ನು ಕಾಯ್ದಿರಿಸುವಂತೆ ತಿಳಿಸಿದ್ದಾರೆ.
ರಾಜ್ಯ ಸಚಿವ ಸಂಪುಟ ಉಪಸಮಿತಿ (ರಾಜ್ಯ ಕೋವಿಡ್ ಸಾಂಕ್ರಾಮಿಕ ರೋಗ ನಿಯಂತ್ರಣ) ಸಭೆ ನಿರ್ದೇಶನದಂತೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಎಚ್ – ಬ್ಲಾಕ್, ಕೆ.ಸಿ.ಜನರಲ್ ಆಸ್ಪತ್ರೆ, ಜಯನಗರ ಸಾರ್ವಜನಿಕ ಆಸ್ಪತ್ರೆ, ಸರ್ ಸಿ.ವಿ.ರಾಮನ್ ಸಾರ್ವಜನಿಕ ಆಸ್ಪತ್ರೆ ಹಾಗೂ ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆಯಲ್ಲಿ ಕೋವಿಡ್ ವಾರ್ಡ್‌ಗಳನ್ನು ಕಾಯ್ದಿರಿಸಲು ಸೂಚಿಸಿದ್ದಾರೆ. ಅದೇ ರೀತಿ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ (ವೈದ್ಯಕೀಯ ಕಾಲೇಜುಗಳು ಸೇರಿದಂತೆ) ಕನಿಷ್ಠ 10 ಸಾಮಾನ್ಯ ಹಾಸಿಗೆಗಳು ಹಾಗೂ ತುರ್ತು ನಿಗಾ ಘಟಕದಲ್ಲಿ 5 (ಐಸಿಯು) ಹಾಸಿಗೆಗಳನ್ನು ಪ್ರತ್ಯೇಕವಾಗಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಕಾಯ್ದಿರಿಸಲು ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 200ರ ಗಡಿ ದಾಟಿದೆ. ರಾಜ್ಯದಲ್ಲಿ ಶನಿವಾರ ಒಂದೇ ದಿನ 201 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಒಂದು ಸಾವು ವರದಿಯಾಗಿದೆ. 2 ಡೋಸ್ ಲಸಿಕೆ ಪಡೆದಿದ್ದ ಮೈಸೂರಿನ 74 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ವೃದ್ಧ ವ್ಯಕ್ತಿಯಲ್ಲಿ ಅಧಿಕ ರಕ್ತದೊತ್ತಡ, ಶ್ವಾಸಕೋಶದ ಸಮಸ್ಯೆಗಳಿದ್ದವು ಎಂದು ವರದಿಗಳು ತಿಳಿಸಿವೆ.