ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಬ್ರಹ್ಮಾವರ : ಫೋಟೋಗ್ರಾಫರ್ ಗಣೇಶ್ ಶೆಟ್ಟಿ ನಿಧನ

ಬ್ರಹ್ಮಾವರ : ಡಿ.31, ಹಾವಂಜೆ ಗ್ರಾಮದ ಕೀಳಂಜೆಯ ನಿವಾಸಿ, ಉಡುಪಿ ಕಾಂಗ್ರೆಸ್‌ ಮುಖಂಡ ಜಯಶೆಟ್ಟಿ ಬನ್ನಂಜೆ ಸಹೋದರಾದ ಗಣೇಶ್ ಶೆಟ್ಟಿ(46) ಕೀಳಂಜೆಯವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ನಿಧನರಾದರು.

ಮೃತರು ಪತ್ನಿ ಮತ್ತು ರಾಷ್ಟ್ರೀಯ ಕರಾಟೆ ಪ್ರಶಸ್ತಿ ಪುರಸ್ಕೃತೆಯಾದ ರಿಯಾ ಜಿ. ಶೆಟ್ಟಿಯವರನ್ನು ಅಗಲಿದ್ದಾರೆ. ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿದ್ದ ಶ್ರೀಯುತರು ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು.

ಬನ್ನಂಜೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯವಾಗಿ ಕಾರ್ಯಕರ್ತರಾಗಿ ಗಣೇಶ್ ಶೆಟ್ಟಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

No Comments

Leave A Comment