ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಬೆಳಗಾವಿ: ದುಷ್ಕರ್ಮಿಗಳಿಂದ ಪಂಚಾಯತ್ ಸದಸ್ಯನ ಮನೆ ಸೇರಿ ಹಲವರ ಮೇಲೆ ದಾಳಿ, ವಾಹನ ಸೇರಿ ಹಲವು ವಸ್ತುಗಳಿಗೆ ಹಾನಿ

ಬೆಳಗಾವಿ: ಜಿಲ್ಲೆಯ ನವಗಿ ಗ್ರಾಮದಲ್ಲಿ  ನಿನ್ನೆ ಜನವರಿ 1ರ ಹೊಸವರ್ಷ ರಾತ್ರಿ ಸುಮಾರು 30 ಜನ ಮುಸುಕುಧಾರಿ ಗ್ಯಾಂಗ್ ಅಟ್ಟಹಾಸ ಮೆರೆದಿದ್ದು, ಸುತ್ತಮುತ್ತ ನಿವಾಸಿಗಳು ಭಯಭೀತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ನವಗಿ ಗ್ರಾಮದಲ್ಲಿ ಆಯುಧಗಳು, ಕತ್ತಿಗಳು ಮತ್ತು ದೊಣ್ಣೆಗಳನ್ನು ಹಿಡಿದು ದುಷ್ಕರ್ಮಿಗಳು ಮುಖ್ಯವಾಗಿ ನಾಲ್ಕು ಮನೆಗಳ ಮೇಲೆ ದಾಳಿ ನಡೆಸಿದ್ದು ಮಾತ್ರವಲ್ಲದೆ ವಾಹನಗಳು ಮತ್ತು ಇತರ ವಸ್ತುಗಳನ್ನು ಹಾನಿಗೊಳಿಸಿದ್ದಾರೆ.

ದಾಳಿಗೆ ಒಳಗಾದವರಲ್ಲಿ ಮಾಜಿ ಮತ್ತು ಹಾಲಿ ಪಂಚಾಯಿತಿ ಸದಸ್ಯರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿ ಪಡೆದ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರೇಮ ಪ್ರಕರಣದ ವಿವಾದವೇ ಈ ಘಟನೆಗೆ ಕಾರಣವಾಗಿರಬಹುದು ಎಂದು ಶಂಕಿಸಿದ್ದಾರೆ.

kiniudupi@rediffmail.com

No Comments

Leave A Comment