ಚಿಕ್ಕಮಗಳೂರು: ಡಿಸೆಂಬರ್ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್
ರಾಹುಲ್, ಖರ್ಗೆ ಸಮ್ಮುಖದಲ್ಲಿ ‘ಕೈ’ ಹಿಡಿದ ವೈ ಎಸ್ ಶರ್ಮಿಳಾ: ಕಾಂಗ್ರೆಸ್ ಜೊತೆ YSR ತೆಲಂಗಾಣ ಪಕ್ಷ ವಿಲೀನ!
ನವದೆಹಲಿ: ವೈಎಎಸ್‍ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕಿ ವೈ ಎಸ್ ಶರ್ಮಿಳಾ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ತಡರಾತ್ರಿ ರಾಷ್ಟ್ರ ರಾಜಧಾನಿಗೆ ಆಗಮಿಸಿದ ಶರ್ಮಿಳಾ ಇಂದು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಭೇಟಿಯಾಗಿ ನಂತರ ಪಕ್ಷಕ್ಕೆ ಸೇರ್ಪಡೆಗೊಂಡರು.
ಹೈದರಾಬಾದ್‍ನಲ್ಲಿ ಮಂಗಳವಾರ ನಡೆದ ಪಕ್ಷದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶರ್ಮಿಳಾ, ನಾನು ಮತ್ತು ಇತರ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್‍ನ ಉನ್ನತ ನಾಯಕರನ್ನು ಭೇಟಿ ಮಾಡಿ ದೆಹಲಿಯಲ್ಲಿ ನಿರ್ಣಾಯಕ ಘೋಷಣೆ ಮಾಡಲಿದ್ದೇವೆ ಎಂದು ಹೇಳಿದ್ದರು.
ಅವರು ಗುರುವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ಕಾಂಗ್ರೆಸ್ ಪಕ್ಷದ ಜೊತೆಗೆ ವೈಎಸ್ ಆರ್ ತೆಲಂಗಾಣ ಪಕ್ಷವನ್ನು ವಿಲೀನಗೊಳಿಸಿದ್ದಾರೆ.
ಶರ್ಮಿಳಾ ಅವರು ಅವಿಭಜಿತ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ದಿವಂಗತ ವೈ ಎಸ್ ರಾಜಶೇಖರ ರೆಡ್ಡಿ ಅವರ ಪುತ್ರಿ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರ ಕಿರಿಯ ಸಹೋದರಿಯಾಗಿದ್ದಾರೆ.