ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​

ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಗೆ ಜ.7(ನಾಳೆ) ಮಂಗಳೂರಿನಲ್ಲಿ ಪೌರ ಸಮ್ಮಾನ

ಮಂಗಳೂರು: ಉಡುಪಿಯಲ್ಲಿ ಚತುರ್ಥ ಬಾರಿಗೆ ಪರ್ಯಾಯ ಸರ್ವಜ್ಞ ಪೀಠಾರೋಹಣಗೈಯ್ಯಲಿರುವ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಗೆ ರವಿವಾರ ಮಂಗಳೂರಿನಲ್ಲಿ ಪೌರ ಸಮ್ಮಾನ ನೆರವೇರಲಿದೆ ಎಂದು ತಿಳಿಯಲಾಗಿದೆ.

ಅಪರಾಹ್ನ 3ಕ್ಕೆ ಶಾಸಕ ವೇದವ್ಯಾಸ ಕಾಮತ್‌ ಅವರ ನೇತೃತ್ವದಲ್ಲಿ ಶರವು ದೇಗುಲದಿಂದ ಮೆರವಣಿಗೆ ನಡೆದು ಸಂಜೆ 4ಕ್ಕೆ ರಾಧಾಕೃಷ್ಣ ಮಂದಿರದಲ್ಲಿ ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು ಅಧ್ಯಕ್ಷತೆಯಲ್ಲಿ ಪೌರ ಸಮ್ಮಾನ ಜರಗಲಿದೆ.

ಸೋಮವಾರ ನೆಲ್ಲಿಕಾಯಿ ರಾಘವೇಂದ್ರ ಮಠ, ಹೊಸಬೆಟ್ಟು ರಾಘವೇಂದ್ರ ಮಠದಲ್ಲಿ ಶ್ರೀಗಳು ಪೂಜೆ ನೆರವೇರಿಸಲಿದ್ದಾರೆ ಎಂದು ಕಲ್ಕೂರ ಪ್ರತಿಷ್ಠಾನ ಮತ್ತು ಉಡುಪಿ ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಎಸ್‌. ಪ್ರದೀಪ ಕುಮಾರ ಕಲ್ಕೂರ ತಿಳಿಸಿದ್ದಾರೆ.

No Comments

Leave A Comment