ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಪೂರ್ವ ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ – 11 ಮಂದಿ ಸಾವು, ಹಲವಾರಿಗೆ ಗಾಯ

ಕೀವ್‌:ಜ 7 , ಪೂರ್ವ ಉಕ್ರೇನ್ ನಗರ ಪೊಕ್ರೊವ್‌ಸ್ಕ್‌ ಹಾಗೂ ಸುತ್ತಮುತ್ತ ಪ್ರದೇಶಗಳಿಗೆ ರಷ್ಯಾ ಶನಿವಾರದಂದು ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಸುಮಾರು 10 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜ. 6 ರಂದು ಮಧ್ಯಾಹ್ನ 3ಗಂಟೆಗೆ ರಷ್ಯಾದ ಪಡೆಗಳು ಎಸ್ -300 ಕ್ಷಿಪಣಿಗಳೊಂದಿಗೆ ಪೊಕ್ರೊವ್‌ಸ್ಕ್‌ ಮೇಲೆ ಸಾಮೂಹಿಕ ಶೆಲ್ ದಾಳಿ ನಡೆಸಿವೆ. ಈ ದಾಳಿಯಲ್ಲಿ 3ರಿಂದ 17 ವರ್ಷ ವಯಸ್ಸಿನ ಐದು ಮಕ್ಕಳು ಸೇರಿದಂತೆ 11 ಜನರು ಮೃತಪಟ್ಟಿದ್ದಾರೆ ಎಂದು ಗವರ್ನರ್ ಫಿಲಾಶ್ಕಿನ್ ಖಚಿತ ಮಾಹಿತಿ ನೀಡಿದ್ದಾರೆ.

ಈ ಘಟನೆಯ ಕುರಿತು ಉಕ್ರೇನ್‌ನಲ್ಲಿರುವ ವಿಶ್ವಸಂಸ್ಥೆಯ ಅಧಿಕಾರಿಯೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಉಕ್ರೇನ್ ನಲ್ಲಿ ತಡರಾತ್ರಿಯವರೆಗೂ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಕ್ಷಿಪಣಿ ದಾಳಿ ನಂತರದ ದೃಶ್ಯಗಳನ್ನು ಪ್ರಾದೇಶಿಕ ಗವರ್ನರ್ ವಾಡಿಮ್ ಫಿಲಾಶ್ಕಿನ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

No Comments

Leave A Comment